ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ರಸ್ತೆ ದಾಟುತ್ತಿದ್ದ ಮಹಿಳೆ; ವಿಡಿಯೋ ವೈರಲ್
ಖಾಸಗಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ರಸ್ತೆ ದಾಟುತ್ತಿದ್ದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಂಗಳೂರಿನ ಉಳ್ಳಾಲದ ನರಿಂಗಾನ ಪ್ರದೇಶದಲ್ಲಿ ನಡೆದಿದ್ದು, ಚಾಲಕನ ಸಮಯಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮಂಗಳೂರು: ಖಾಸಗಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ರಸ್ತೆ ದಾಟುತ್ತಿದ್ದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಂಗಳೂರಿನ ಉಳ್ಳಾಲ (Ullal) ದ ನರಿಂಗಾನ ಪ್ರದೇಶದಲ್ಲಿ ನಡೆದಿದೆ. ಮಂಗಳೂರಿನಿಂದ ಮುಡಿಪುಗೆ ತೆರಳುತ್ತಿದ್ದ ಖಾಸಗಿ ಬಸ್ ಬರುತ್ತಿದ್ದನ್ನು ಗಮನಿಸದೆ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬರುತ್ತಿದ್ದ ಬಸ್ ಮಹಿಳೆಯನ್ನ ತಪ್ಪಿಸಲು ಚಾಲಕ ದಿಢೀರ್ ಎಡಕ್ಕೆ ತಿರುಗಿಸಿದ್ದಾನೆ. ಹೌದು ಕೂದಲೆಳೆ ಅಂತರದಲ್ಲಿ ಪಾದಚಾರಿ ಮಹಿಳೆಯನ್ನ ಚಾಲಕ ರಕ್ಷಿಸಿದ್ದಾನೆ. ಘಟನೆಯ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ. ಚಾಲಕನ ಸಮಯಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇನ್ನಷ್ಟು ವಿಡಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us