ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು, ಮಹಿಳೆ ಸಾವು

Edited By:

Updated on: Sep 18, 2026 | 2:37 PM

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಫ್ಲೈಓವರ್​ ಮೇಲೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜನಾ(32) ಸಾವಪ್ಪಿದ್ದಾರೆ. ಫ್ಲೈಓವರ್​ನಿಂದ ಕಾರು ಕೆಳಗೆ ಬಿದ್ದಾಗ ಅಂಜನಾ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಡ್ಯ, (ಸೆಪ್ಟೆಂಬರ್ 18): ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಫ್ಲೈಓವರ್​ ಮೇಲೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜನಾ(32) ಸಾವಪ್ಪಿದ್ದಾರೆ. ಫ್ಲೈಓವರ್​ನಿಂದ ಕಾರು ಕೆಳಗೆ ಬಿದ್ದಾಗ ಅಂಜನಾ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More