ಚುನಾವಣೆ ವೇಳೆ ಮತ ಕೇಳೋಕೆ ಬಂದರೆ ಬುದ್ಧಿ ಕಲಿಸುತ್ತೇವೆ; ಕೊಪ್ಪಳ ಮಹಿಳೆ ವಿಡಿಯೋ ವೈರಲ್
ಚುನಾವಣೆ ವೇಳೆ ಮತ ಕೇಳೋಕೆ ಬಂದರೆ ಬುದ್ಧಿ ಕಲಿಸುತ್ತೇವೆ. ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ಗಳು ತೆರೆಯದ ಹಿನ್ನೆಲೆ ಅಪಾರ ಪ್ರಮಾಣದ ನೀರು ಜಮೀನಿಗೆ ನುಗ್ಗಿ ಬೆಳೆ ಹಾನಿಯಾಗಿತ್ತು. ಆದರೆ ಯಾರು ಭೇಟಿ ನೀಡಿಲ್ಲ.
ಕೊಪ್ಪಳ: ನಿರಂತರ ಮಳೆಗೆ (Rain) ರಾಜ್ಯದಲ್ಲಿ ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ರೈತರು (Farmers) ಬೆಳೆದ ಬೆಳೆ ಸಂಪೂರ್ಣ ನಾಶವಾಗಿದ್ದು, ಸ್ಥಳಕ್ಕೆ ಭೇಟಿ ನೀಡುತ್ತಿರುವ ಜನಪ್ರತಿನಿಧಿಗಳು ಪರಿಹಾರ ನೀಡುವ ಭರವಸೆ ನೀಡುತ್ತಿದ್ದಾರೆ. ಆದರೆ ಕೊಪ್ಪಳ ತಾಲೂಕಿನ ಮಂಗಳಾಪುರದಲ್ಲಿ ಬೆಳೆ ಹಾನಿ ಪ್ರದೇಶಕ್ಕೆ ಜನಪ್ರತಿನಿಧಿಗಳು ಭೇಟಿ ನೀಡಿಲ್ಲ. ಹೀಗಾಗಿ ಮಹಿಳೆಯೊಬ್ಬರು ಶಾಸಕರು, ಸಂಸದರು ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆ ವೇಳೆ ಮತ ಕೇಳೋಕೆ ಬಂದರೆ ಬುದ್ಧಿ ಕಲಿಸುತ್ತೇವೆ. ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ಗಳು ತೆರೆಯದ ಹಿನ್ನೆಲೆ ಅಪಾರ ಪ್ರಮಾಣದ ನೀರು ಜಮೀನಿಗೆ ನುಗ್ಗಿ ಬೆಳೆ ಹಾನಿಯಾಗಿತ್ತು. ಆದರೆ ಯಾರು ಭೇಟಿ ನೀಡಿಲ್ಲ. ಕಳೆದ ಬಾರಿಯೂ ಸರ್ಕಾರ ಪರಿಹಾರ ನೀಡಿಲ್ಲ ಅಂತ ಮಹಿಳೆ ಗರಂ ಆಗಿದ್ದು, ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos