ವಿಜಯಪುರ: ಚಲಿಸುತ್ತಿದ್ದ ಬಸ್ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ
ಚಲಿಸುತ್ತಿದ್ದ ಸರ್ಕಾರಿ ಬಸ್ನ ಹಿಂಬದಿ ಚಕ್ರದ ಅಡಿ ಬಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಡೆದಿದೆ. ಯುವಕ ಬಸ್ ಚಕ್ರದ ಕೆಳಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಚಕ್ರದಡಿ ಬೀಳುವುದನ್ನು ಕಾಣಬಹುದು.
ವಿಜಯಪುರ, ಜ.9: ಚಲಿಸುತ್ತಿದ್ದ ಸರ್ಕಾರಿ ಬಸ್ನ ಹಿಂಬದಿ ಚಕ್ರದ ಅಡಿ ಬಿದ್ದ ಯುವಕ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ವಿಜಯಪುರ (Vijayapura) ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಡೆದಿದೆ. ಯುವಕ ಬಸ್ ಚಕ್ರದ ಕೆಳಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಚಕ್ರದಡಿ ಬೀಳುವುದನ್ನು ಕಾಣಬಹುದು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೂಲದ ವಿಶ್ವನಾಥ ಶಂಕರಯ್ಯ (38) ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿಲ್ಲ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತ ಯುವಕನ ಕುಟುಂಬಸ್ಥರನ್ನು ಸಂಪರ್ಕಿಸಲು ಮುಂದಾಗಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ