ವಿಜಯಪುರ: ಚಲಿಸುತ್ತಿದ್ದ ಬಸ್​ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

Edited By: Rakesh Nayak Manchi

Updated on: Jan 09, 2024 | 9:24 PM

ಚಲಿಸುತ್ತಿದ್ದ ಸರ್ಕಾರಿ ಬಸ್​ನ ಹಿಂಬದಿ ಚಕ್ರದ ಅಡಿ ಬಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಡೆದಿದೆ. ಯುವಕ ಬಸ್ ಚಕ್ರದ ಕೆಳಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್​ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಚಕ್ರದಡಿ ಬೀಳುವುದನ್ನು ಕಾಣಬಹುದು.

ವಿಜಯಪುರ, ಜ.9: ಚಲಿಸುತ್ತಿದ್ದ ಸರ್ಕಾರಿ ಬಸ್​ನ ಹಿಂಬದಿ ಚಕ್ರದ ಅಡಿ ಬಿದ್ದ ಯುವಕ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ವಿಜಯಪುರ (Vijayapura) ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಡೆದಿದೆ. ಯುವಕ ಬಸ್ ಚಕ್ರದ ಕೆಳಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್​ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಚಕ್ರದಡಿ ಬೀಳುವುದನ್ನು ಕಾಣಬಹುದು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೂಲದ ವಿಶ್ವನಾಥ ಶಂಕರಯ್ಯ (38) ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿಲ್ಲ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತ ಯುವಕನ ಕುಟುಂಬಸ್ಥರನ್ನು ಸಂಪರ್ಕಿಸಲು ಮುಂದಾಗಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 09, 2024 09:22 PM
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More