ಮಹಿಳೆಯ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ; ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು
ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಗೆ ಗ್ರಾಮಸ್ಥರೆಲ್ಲರೂ ಸೇರಿ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಕೊಪ್ಪಳ: ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಗೆ ಗ್ರಾಮಸ್ಥರೆಲ್ಲರೂ ಸೇರಿ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಗಂಗಾವತಿ(Gangavathi) ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ನಡೆದಿದೆ. ಮಹಿಳೆಯು ಹೋಗುತ್ತಿದ್ದಾಗ ಬೈಕ್ನಲ್ಲಿ ಇಬ್ಬರು ಯುವಕರು ಬಂದು ಮಾಂಗಲ್ಯ ಸರವನ್ನ ಖದೀಯಲು ಯತ್ನಿಸಿದ್ದಾರೆ. ಈ ವೇಳೆ ಗ್ರಾಮಸ್ಥರು ಸೇರಿ ಓರ್ವ ಆರೋಪಿ ಪವನ್ ಎಂಬಾತನನ್ನ ಸೆರೆ ಹಿಡಿದಿದ್ದು, ಇನ್ನೋರ್ವ ಆರೋಪಿ ಮಂಜು ಪರಾರಿಯಾಗಿದ್ದಾನೆ. ಸೆರೆ ಸಿಕ್ಕ ಆರೋಪಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 28, 2023 08:48 AM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
