ಮಹಿಳೆಯ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ; ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

Edited By: ಕಿರಣ್ ಹನುಮಂತ್​ ಮಾದಾರ್

Updated on: Jun 28, 2023 | 8:53 AM

ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಗೆ ಗ್ರಾಮಸ್ಥರೆಲ್ಲರೂ ಸೇರಿ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ನಡೆದಿದೆ.

ಕೊಪ್ಪಳ: ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಗೆ ಗ್ರಾಮಸ್ಥರೆಲ್ಲರೂ ಸೇರಿ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಗಂಗಾವತಿ(Gangavathi) ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ನಡೆದಿದೆ. ಮಹಿಳೆಯು ಹೋಗುತ್ತಿದ್ದಾಗ ಬೈಕ್​ನಲ್ಲಿ ಇಬ್ಬರು ಯುವಕರು ಬಂದು ಮಾಂಗಲ್ಯ ಸರವನ್ನ ಖದೀಯಲು ಯತ್ನಿಸಿದ್ದಾರೆ. ಈ ವೇಳೆ ಗ್ರಾಮಸ್ಥರು ಸೇರಿ ಓರ್ವ ಆರೋಪಿ ಪವನ್ ಎಂಬಾತನನ್ನ ಸೆರೆ ಹಿಡಿದಿದ್ದು, ಇನ್ನೋರ್ವ ಆರೋಪಿ ಮಂಜು ಪರಾರಿಯಾಗಿದ್ದಾನೆ. ಸೆರೆ ಸಿಕ್ಕ ಆರೋಪಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 28, 2023 08:48 AM
Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More