ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಕೊಲೆ ಆರೋಪಿಗೆ ಮುತ್ತಿಕ್ಕಿದ ಯುವಕ

Edited By:

Updated on: Apr 07, 2025 | 3:57 PM

ಪೊಲೀಸ್ ಭದ್ರತೆ ನಡೆವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್​ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.

ಮಂಗಳೂರು, (ಏಪ್ರಿಲ್ 07): ಪೊಲೀಸ್ ಭದ್ರತೆ ನಡೆವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಕೊಲೆ ಪ್ರಕರಣದ (Praveen Nettaru murder Case) ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು (shafi bellare) ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ (belthangady Court )ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್​ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್​ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದ್ರೆ, 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್​ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಿದರು. ಈ ವೇಲೆ ಈ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More