ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ

Updated on: Nov 12, 2025 | 3:13 PM

ಜೀ ಕನ್ನಡದಲ್ಲಿ ಹೊಸ ಹೊಸ ಧಾರಾವಾಹಿಗಳೂ ಬರುತ್ತಿವೆ. ಈಗ ಹೊಸ ಧಾರಾವಾಹಿ ಒಂದು ಬರ್ತಿದೆ. ಈ ಧಾರಾವಾಹಿ ಹೆಸರು ಆದಿಲಕ್ಷ್ಮೀ ಪುರಾಣ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಧಾರಾವಾಹಿಯ ಪ್ರೋಮೋವನ್ನು ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ರಾಧಿಕಾ ಪಂಡಿತ್ ಅವರು 2019ರಲ್ಲಿ ‘ಆದಿ ಲಕ್ಷ್ಮೀ ಪುರಾಣ’ ಹೆಸರಿನ ಸಿನಿಮಾ ಮಾಡಿದ್ದರು. ಈಗ ಇದೇ ಟೈಟಲ್​ನಲ್ಲಿ ಧಾರಾವಾಹಿ ಒಂದು ಬರುತ್ತಿದೆ. ಜೀ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಕಥಾ ನಾಯಕ ಆದಿ ಹಾಗೂ ನಾಯಕಿ ಲಕ್ಷ್ಮೀ ನಡುವಿನ ಕಥೆಯೇ ‘ಆದಿ ಲಕ್ಷ್ಮೀ ಪುರಾಣ’. ಈ ಧಾರಾವಾಹಿ ಪ್ರಸಾರ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 12, 2025 03:02 PM
Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More