ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ; ಮೈಕ್‌ಗಳ ಧ್ವಂಸ, ಕಡತಗಳ ಎಸೆದಾಟ!

Updated on: Oct 22, 2026 | 9:20 PM

ದೆಹಲಿಯ ಎಂಸಿಡಿ ಸದನದಲ್ಲಿ ಆಮ್ ಆದ್ಮಿ ಪಕ್ಷ (ಆಪ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೌನ್ಸಿಲರ್‌ಗಳ ನಡುವೆ ಇಂದು ತೀವ್ರ ಸ್ವರೂಪದ ಸಂಘರ್ಷ ನಡೆದಿದೆ. ಸದನದ ಬಾವಿಗಿಳಿದು ಎರಡೂ ಪಕ್ಷಗಳ ಸದಸ್ಯರು ಪರಸ್ಪರ ಘೋಷಣೆಗಳನ್ನು ಕೂಗಿದರಲ್ಲದೆ, ಮೈಕ್‌ಗಳನ್ನು ಮುರಿದು, ಕಡತಗಳನ್ನು ಗಾಳಿಯಲ್ಲಿ ಎಸೆದು ತೀವ್ರ ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮೇಯರ್ ಅವರನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ನವದೆಹಲಿ, ಅಕ್ಟೋಬರ್ 22: ದೆಹಲಿಯ ಮಹಾನಗರ ಪಾಲಿಕೆ ಸದನದಲ್ಲಿ ಆಮ್ ಆದ್ಮಿ ಪಕ್ಷ (ಆಪ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೌನ್ಸಿಲರ್‌ಗಳ ನಡುವೆ ಇಂದು ತೀವ್ರ ಸ್ವರೂಪದ ಸಂಘರ್ಷ ನಡೆದಿದೆ. ಸದನದ ಬಾವಿಗಿಳಿದು ಎರಡೂ ಪಕ್ಷಗಳ ಸದಸ್ಯರು ಪರಸ್ಪರ ಘೋಷಣೆಗಳನ್ನು ಕೂಗಿದರಲ್ಲದೆ, ಮೈಕ್‌ಗಳನ್ನು ಮುರಿದು, ಕಡತಗಳನ್ನು ಗಾಳಿಯಲ್ಲಿ ಎಸೆದು ತೀವ್ರ ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮೇಯರ್ ಅವರನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ಸದನದಲ್ಲಿ ಗದ್ದಲ ಮಿತಿಮೀರುತ್ತಿದ್ದಂತೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಉದ್ವಿಗ್ನತೆ ಹೆಚ್ಚಾಯಿತು. ಸದಸ್ಯರು ಆಸನಗಳ ಮೇಲೆ ಹತ್ತಿ ಆಕ್ರೋಶ ಹೊರಹಾಕಿದ ಪರಿಣಾಮ ಕಲಾಪವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಈ ಸಭೆಯಲ್ಲಿ ಉಂಟಾದ ಈ ಗೊಂದಲದ ವಾತಾವರಣದಿಂದಾಗಿ ಮೇಯರ್ ಅವರನ್ನು ತಕ್ಷಣವೇ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಬೇಕಾಯಿತು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More