Video: ಚುನಾವಣಾ ಪ್ರಚಾರದ ವೇಳೆ ಮಹಿಳೆಗೆ ಮುತ್ತು ಕೊಟ್ಟ ಎಎಪಿ ಶಾಸಕ

Updated on: Feb 05, 2025 | 9:21 AM

ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಆಮ್ ಆದ್ಮಿ ಪಕ್ಷದ ಶಾಸಕ ದಿನೇಶ್​ ಮೊಹಾನಿಯಾ ವಿರುದ್ಧ ಮಹಿಳೆಯೊಬ್ಬರ ಜತೆ ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ಅವರು ಪ್ರಚಾರದ ವೇಳೆ ಕೆಟ್ಟದಾಗಿ ಸನ್ನೆ ಮಾಡಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆಂದು ಆರೋಪಿಸಲಾಗಿದೆ. ಸಂಗಮ್ ವಿಹಾರ್‌ನ ಎಎಪಿ ಶಾಸಕನ ವಿರುದ್ಧ ಪೊಲೀಸರು ಕಿರುಕುಳ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಪ್ರಚಾರದ ಸಮಯದಲ್ಲಿ ಶಾಸಕರು ನನಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆಮದು ಮಹಿಳೆ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಇಂದು ಚುನಾವಣೆ ನಡೆಯಲಿರುವ ನಡುವೆಯೇ ಈ ಘಟನೆ ನಡೆದಿದೆ. ಸಂಗಮ್ ವಿಹಾರ್‌ನಿಂದ ಮೂರು ಬಾರಿ ಶಾಸಕರಾಗಿದ್ದ ಅವರನ್ನು ಮತ್ತೊಮ್ಮೆ ತಮ್ಮ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಮೊಹಾನಿಯಾಗೆ ವಿವಾದಗಳು ಹೊಸದೇನಲ್ಲ. ಕಳೆದ ವರ್ಷ, ಅವರ ಕ್ಷೇತ್ರದ ರಸ್ತೆಬದಿಯ ಹಣ್ಣು ಮಾರಾಟಗಾರನ ಮೇಲೆ ನಿಂದನೆ ಮಾಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Feb 05, 2025 09:20 AM