AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?

ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?

ರಾಜೇಶ್ ದುಗ್ಗುಮನೆ
|

Updated on: Oct 23, 2026 | 8:31 AM

Share

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರ ಕ್ಯಾಪ್ಟನ್ ಸ್ಥಾನಕ್ಕಾಗಿ ಸೌಂದರ್ಯ ಹಾಗೂ ಆಸಿಯಾ ನಡುವೆ ಭೀಕರ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರ ನಡುವಿನ ಈ ರೋಚಕ ಟಾಸ್ಕ್ ವೀಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಮನೆಯ ಮುಂದಿನ ನಾಯಕ ಯಾರೆಂಬುದು ಶೀಘ್ರದಲ್ಲೇ ನಿರ್ಧಾರವಾಗಲಿದೆ.

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಈ ವಾರದ ಕ್ಯಾಪ್ಟನ್ಸಿಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಸೌಂದರ್ಯ ಹಾಗೂ ಆಸಿಯಾ ಅವರ ನಡುವೆ ಕ್ಯಾಪ್ಟನ್ ಪಟ್ಟಕ್ಕಾಗಿ ರೋಚಕ ಟಾಸ್ಕ್ ನಡೆದಿದೆ. ಈ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಸ್ಪರ್ಧಿಗಳು ಹಗ್ಗವನ್ನು ಹಿಡಿದು ಬಹಳ ಎಚ್ಚರಿಕೆಯಿಂದ ಮತ್ತು ತಾಳ್ಮೆಯಿಂದ ಆಡಬೇಕಿದೆ. ನಿರ್ದಿಷ್ಟ ಸಂಖ್ಯೆಯ ಬಿಲ್ಲೆಗಳನ್ನು ಒಂದರ ಮೇಲೆ ಮತ್ತೊಂದರಂತೆ ನೇರವಾಗಿ ಇಡುವ ಸವಾಲು ನೀಡಲಾಗಿದೆ. ಅತ್ಯಂತ ತಾಳ್ಮೆಯಿಂದ, ಕೈ ನಡುಗದೆ ಈ ಆಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವವರು ಮನೆಯ ಮುಂದಿನ ಕ್ಯಾಪ್ಟನ್ ಆಗಿ ಆಯ್ಕೆಯಾಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More