ಈಡನ್ ಗಾರ್ಡನ್ಸ್ನಲ್ಲಿ ಕೊಹ್ಲಿಯನ್ನು ಭೇಟಿಯಾದ ಡಿವಿಲಿಯರ್ಸ್: ಬರ್ತ್ ಡೇ ವಿಶ್ ಮಾಡಿದ್ದು ಹೇಗೆ ನೋಡಿ
Ab De Villiers hugging Virat Kohli: ಈಡನ್ ಗಾರ್ಡನ್ಸ್ ಸ್ಟೇಡಿಯಂ ಪೂರ್ತಿ ಕೊಹ್ಲಿ ಮಯವಾಗಿದ್ದು, ಅಭಿಮಾನಿಗಳು ಘೋಷಣೆ ಕೂಗುವ ಮೂಲಕ ಶುಭಕೋರುತ್ತಿದ್ದಾರೆ. ಇದರ ನಡುವೆ ಆಫ್ರಿಕಾದ ಹಾಗೂ ಆರ್ಸಿಬಿಯ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಹ್ಲಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ.
ಐಸಿಸಿ ಏಕದಿನ ವಿಶ್ವಕಪ್ನಲ್ಲಿಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಇದರ ಜೊತೆಗೆ ಇಂದು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹುಟ್ಟುಹಬ್ಬ ಕೂಡ. ಸ್ಟೇಡಿಯಂ ಪೂರ್ತಿ ಕೊಹ್ಲಿ ಮಯವಾಗಿದ್ದು, ಅಭಿಮಾನಿಗಳು ಘೋಷಣೆ ಕೂಗುವ ಮೂಲಕ ಶುಭಕೋರುತ್ತಿದ್ದಾರೆ. ಇದರ ನಡುವೆ ಆಫ್ರಿಕಾದ ಹಾಗೂ ಆರ್ಸಿಬಿಯ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಹ್ಲಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ. ವಿರಾಟ್ ಮೈದಾನಕ್ಕೆ ಆಗಮಿಸುತ್ತಿದ್ದಂತೆ ಎಬಿಡಿ ಕೂಡ ಬೌಂಡರಿ ಲೈನ್ ಬಳಿ ಬಂದು ವಿರಾಟ್ ಅವರನ್ನು ಅಪ್ಪಿಕೊಂಡು ಬರ್ತ್ ಡೇ ವಿಶ್ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos