ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್: ಎಲ್ಲೆಲ್ಲೂ ಖಾಕಿ ಪಡೆ ನಿಯೋಜನೆ

Edited By:

Updated on: May 28, 2025 | 8:22 AM

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೋಳತ್ತಮಜಲಿನಲ್ಲಿ ಮಂಗಳವಾರ ರಾತ್ರಿ ಅಬ್ದುಲ್ ರಹಿಮಾನ್ ಎಂಬಾತನ ಕೊಲೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಮಂಗಳೂರು ಮತ್ತೆ ಉದ್ವಿಗ್ನವಾಗಿದೆ. ಸದ್ಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಬಿಎನ್​ಎಸ್​ 163ರ ಅಡಿ ಮೇ 30ರ ಸಂಜೆ 6 ಗಂಟೆಯವೆಗೆ ನಿಷೇಧಾಜ್ಞೆ ಹೇರಲಾಗಿದ್ದು, ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಅಬ್ದುಲ್ ರಹಿಮಾನ್ ಎಂಬಾತನ ಕೊಲೆಯಾಗಿದ್ದು, ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಜಿಲ್ಲೆಯ ಪ್ರಮುಖ ಪ್ರದೇಶಗಳಲ್ಲಿ ಮೇ 30ರ ಸಂಜೆ 6 ಗಂಟೆಯವೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರ, ಬಂಟ್ವಾಳ ಸೇರಿದಂತೆ ಜಿಲ್ಲೆಯಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More