AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ: ಅಭಿನವ ಸಂಗನಬಸವ ಸ್ವಾಮೀಜಿ

“ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ”: ಅಭಿನವ ಸಂಗನಬಸವ ಸ್ವಾಮೀಜಿ

ಅಶೋಕ ಯಡಳ್ಳಿ, ವಿಜಯಪುರ
| Edited By: ವಿವೇಕ ಬಿರಾದಾರ|

Updated on:Nov 14, 2024 | 12:15 PM

Share

ವಿಜಯಪುರದಲ್ಲಿ ನಡೆದ ಕಿತ್ತೂರ ರಾಣಿ ಚನ್ನಮ್ಮನ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ.

ವಿಜಯಪುರ, ನವೆಂಬರ್​ 14: ಬಸವನಬಾಗೇವಾಡಿ (Basavan Bagewadi) ತಾಲೂಕಿನ ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಕೊಲ್ಹಾರ (Kolar) ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಯುವಕ ಸಂಘ ಹಾಗೂ ಕೊಲ್ಹಾರ ತಾಲೂಕು ಪಂಚಮಸಾಲಿ ಸಮಾಜವತಿಯಿಂದ ನಡೆದ ಕಿತ್ತೂರ ರಾಣಿ ಚನ್ನಮ್ಮನ 246ನೇ ಜಯಂತ್ಯೋತ್ಸವ ಹಾಗೂ 200ನೇ ವಿಜಯೋತ್ಸವ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಅಭಿನವ ಸಂಗನಬಸವ ಸ್ವಾಮೀಜಿ “ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಬಸವ ಜಯಮೃತ್ಯುಂಜಯ ಶ್ರೀಗಳ ಹೆಗಲ ಮೇಲೆ ಸಿದ್ದರಾಮಯ್ಯ ಹಾಕಿದ್ದರು. ನಾನಾಗಿದ್ದರೆ ಸಿಎಂ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ. ಆದರೆ, ಬಸವ ಜಯಮೃತ್ಯುಂಜಯ ಶ್ರೀಗಳು ಸುಮ್ಮನೆ ಇದ್ದರು” ಎಂದು ಸಿಎಂ ಅವರನ್ನು ಅಭಿನವ ಸಂಗನಬಸವಶ್ರೀಗಳು ಏಕವಚನದಲ್ಲಿ ನಿಂದಿಸಿದ್ದಾರೆ.

ಸ್ವಾಮೀಜಿ‌‌ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ‌ ಜಾಲತಾಣಗಳಲ್ಲಿ ಸ್ವಾಮೀಜಿ ಅವರಿಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. “ಮಾತಿನ‌ ಭರದದಲ್ಲಿ‌ ಸಿಎಂ ವಿರುದ್ಧ ಮಾತನಾಡಿದೆ. ಅವರ ಸ್ಥಾನಮಾನಕ್ಕೆ ಅವಮಾನ ಮಾಡಿದೆ. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇನೆಂದು” ಎಂದು ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Nov 14, 2024 11:39 AM
Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More