Abhishek Ambareesh Engagement: ಅಭಿಷೇಕ್ ಅಂಬರೀಷ್-ಅವಿವಾ ನಿಶ್ಚಿತಾರ್ಥಕ್ಕೆ ಸಜ್ಜಾದ ಖಾಸಗಿ ಹೋಟೆಲ್; ಆಪ್ತರಿಗಷ್ಟೇ ಆಹ್ವಾನ
Abhishek Ambareesh | Aviva Bidapa: ಅಭಿಷೇಕ್ ಅಂಬರೀಷ್ ನಿಶ್ಚಿತಾರ್ಥಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡೂ ಕುಟುಂಬದ ಆಪ್ತರು ಮಾತ್ರ ಈ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ.
‘ರೆಬಲ್ ಸ್ಟಾರ್’ ಅಂಬರೀಷ್ ಹಾಗೂ ಸುಮಲತಾ ದಂಪತಿಯ ಪುತ್ರ ಅಭಿಷೇಕ್ ಅಂಬರೀಷ್ (Abhishek Ambareesh) ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಬಿದ್ದಪ್ಪ (Aviva Bidapa) ಜೊತೆ ಇಂದು (ಡಿ.11) ಅಭಿಷೇಕ್ ಅವರು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಈ ಶುಭ ಕಾರ್ಯಕ್ಕಾಗಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡೂ ಕುಟುಂಬದ ಆಪ್ತರು ಮಾತ್ರ ಈ ಸಮಾರಂಭಕ್ಕೆ ಸಾಕ್ಷಿ ಆಗಲಿದ್ದಾರೆ. ಅಭಿಷೇಕ್ ಅಂಬರೀಷ್ ನಿಶ್ಚಿತಾರ್ಥದ (Abhishek Ambareesh Engagement) ಬಗ್ಗೆ ಕುಟುಂಬದವರು ಇನ್ನಷ್ಟೇ ಅಧಿಕೃತವಾಗಿ ಮಾತನಾಡಬೇಕಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 11, 2022 10:27 AM
Latest Videos