‘ಬ್ಯಾಡ್ಮ್ಯಾನರ್ಸ್’ ಕತೆ ಏನು: ಅಭಿಷೇಕ್ ಅಂಬರಿಶ್ ಬಿಟ್ಟುಕೊಟ್ಟರು ಗುಟ್ಟು
Abhishek Ambareesh: ಅಭಿಷೇಕ್ ಅಂಬರೀಶ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ದುನಿಯಾ ಸೂರಿ ನಿರ್ದೇಶನದ ಈ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲವಿದೆ. ಈ ನಡುವೆ ಸಿನಿಮಾದ ಕತೆಯ ಗುಟ್ಟೊಂದನ್ನು ಅಭಿಷೇಕ್ ಬಿಟ್ಟುಕೊಟ್ಟಿದ್ದಾರೆ.
ಅಭಿಷೇಕ್ ಅಂಬರೀಶ್ (Abhishek Ambareesh) ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅಭಿಷೇಕ್ ಹಾಗೂ ಸಿನಿಮಾ ತಂಡ ಬ್ಯುಸಿಯಾಗಿದೆ. ಸಿನಿಮಾದ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಅಭಿಷೇಕ್ ಅಂಬರೀಶ್, ಸಿನಿಮಾದಲ್ಲಿ ತಮ್ಮದು ಮಫ್ತಿಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬನ ಪಾತ್ರ ಎಂದು ಹೇಳಿಕೊಂಡಿದ್ದಾರೆ. ಆದರೆ ಪೊಲೀಸ್ ಅಧಿಕಾರಿಯ ಕತೆ ಮಾತ್ರವೇ ಅಲ್ಲದೆ ಇನ್ನೂ ಹಲವು ಥ್ರಿಲ್ಲರ್ ಅಂಶಗಳು ಈ ಸಿನಿಮಾದಲ್ಲಿ ಇರಲಿವೆ ಎಂದು ಅಭಿಷೇಕ್ ಹೇಳಿಕೊಂಡಿದ್ದಾರೆ. ಬ್ಯಾಡ್ ಮ್ಯಾನರ್ಸ್ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ರಚಿತಾ ರಾಮ್ ಸಹ ನಟಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos