‘ಬ್ಯಾಡ್​ಮ್ಯಾನರ್ಸ್’ ಕತೆ ಏನು: ಅಭಿಷೇಕ್ ಅಂಬರಿಶ್ ಬಿಟ್ಟುಕೊಟ್ಟರು ಗುಟ್ಟು

Updated on: Nov 21, 2023 | 2:54 PM

Abhishek Ambareesh: ಅಭಿಷೇಕ್ ಅಂಬರೀಶ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ದುನಿಯಾ ಸೂರಿ ನಿರ್ದೇಶನದ ಈ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲವಿದೆ. ಈ ನಡುವೆ ಸಿನಿಮಾದ ಕತೆಯ ಗುಟ್ಟೊಂದನ್ನು ಅಭಿಷೇಕ್ ಬಿಟ್ಟುಕೊಟ್ಟಿದ್ದಾರೆ.

ಅಭಿಷೇಕ್ ಅಂಬರೀಶ್ (Abhishek Ambareesh)  ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅಭಿಷೇಕ್ ಹಾಗೂ ಸಿನಿಮಾ ತಂಡ ಬ್ಯುಸಿಯಾಗಿದೆ. ಸಿನಿಮಾದ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಅಭಿಷೇಕ್ ಅಂಬರೀಶ್, ಸಿನಿಮಾದಲ್ಲಿ ತಮ್ಮದು ಮಫ್ತಿಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬನ ಪಾತ್ರ ಎಂದು ಹೇಳಿಕೊಂಡಿದ್ದಾರೆ. ಆದರೆ ಪೊಲೀಸ್ ಅಧಿಕಾರಿಯ ಕತೆ ಮಾತ್ರವೇ ಅಲ್ಲದೆ ಇನ್ನೂ ಹಲವು ಥ್ರಿಲ್ಲರ್ ಅಂಶಗಳು ಈ ಸಿನಿಮಾದಲ್ಲಿ ಇರಲಿವೆ ಎಂದು ಅಭಿಷೇಕ್ ಹೇಳಿಕೊಂಡಿದ್ದಾರೆ. ಬ್ಯಾಡ್ ಮ್ಯಾನರ್ಸ್ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ರಚಿತಾ ರಾಮ್ ಸಹ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More