ಮಂಡ್ಯ ಬಿಟ್ಟು ಹೋಗಲ್ಲ, ಖಡಕ್ ಡೈಲಾಗ್ ಹೊಡೆದ ಅಭಿಷೇಕ್ ಅಂಬರೀಶ್
Abhishek Ambareesh: ಸುಮಲತಾ ಅವರಿಗೆ ಲೋಕಸಭೆ ಟಿಕೆಟ್ ಕೈತಪ್ಪಿರುವ ವಿಚಾರವಾಗಿ ಇಂದು ಕರೆಯಲಾಗಿದ್ದ ಸಭೆಯಲ್ಲಿ ಖಡಕ್ ಆಗಿ ಮಾತನಾಡಿದ್ದಾರೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್.
ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದೆ. ಬಿಜೆಪಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ದೊರಕುವ ಭರವಸೆಯಲ್ಲಿ ಸುಮಲತಾ ಇದ್ದರು. ಬಿಜೆಪಿಗೆ ಸೇರ್ಪಡೆ ಆಗುವ ಘೋಷಣೆ ಮಾಡಿದ್ದರು. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಕಾರಣದಿಂದ ಮಂಡ್ಯ ಲೋಕಸಭೆ ಟಿಕೆಟ್ ಮಾಜಿ ಸಿಎಂ ಕುಮಾರಸ್ವಾಮಿ ಪಾಲಾಗಿದೆ. ಸುಮಲತಾ ಅವರಿಗೆ ಬೇರೆ ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ಭರವಸೆ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಸುಮಲತಾ ಅವರು ಅವರು ಒಪ್ಪಿಗೆ ನೀಡಿಲ್ಲ. ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲೆಂದು ಇಂದು (ಮಾರ್ಚ್ 30) ಕರೆದಿದ್ದ ಸಭೆಯಲ್ಲಿ ಮಾತನಾಡಿದ ಸುಮಲತಾರ ಪುತ್ರ ನಟ ಅಭಿಷೇಕ್ ಅಂಬರೀಶ್, ‘ನಾವು ಮಂಡ್ಯ ಬಿಟ್ಟು ಹೋಗಲ್ಲ’ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ