ಹಿರಿಯ ನಟಿ ಲೀಲಾವತಿ ಮನೆಗೆ ಅಭಿಷೇಕ್ ಅಂಬರೀಶ್ ಭೇಟಿ
Abhishek Ambareesh: ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ಕ್ಷೀಣಿಸಿದ್ದು ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದಾರೆ. ನಟ ಅಭಿಷೇಕ್ ಅಂಬರೀಶ್ ಹಿರಿಯ ನಟಿಯ ಆರೋಗ್ಯ ವಿಚಾರಿಸಲು ಅವರ ಮನೆಗೆ ತೆರಳಿದ್ದರು.
ಕನ್ನಡ ಚಿತ್ರರಂಗದ (Sandalwood) ಹಿರಿಯ ನಟಿ ಲೀಲಾವತಿ (Leelavathi) ಆರೋಗ್ಯ ಕ್ಷೀಣಿಸಿದೆ. ವಯೋಸಹಜ ಸಮಸ್ಯೆಗಳಿಂದ ಅವರು ಬಳಲುತ್ತಿದ್ದಾರೆ. ಸಂಪೂರ್ಣವಾಗಿ ಹಾಸಿಗೆ ಹಿಡಿದಿರುವ ಲೀಲಾವತಿ ಅವರಿಗೆ ಮಾತನಾಡಲು ಕಷ್ಟವಾಗುತ್ತಿದೆ. ಚಿತ್ರರಂಗದ ಮಂದಿ ಹಿರಿಯ ನಟಿಯ ಆರೋಗ್ಯದ ಬಗ್ಗೆ ಆತಂಕಿತರಾಗಿದ್ದು ಒಬ್ಬರ ಹಿಂದೊಬ್ಬರಂತೆ ಆಗಮಿಸಿ ಹಿರಿಯ ನಟಿಯ ಭೇಟಿ ಮಾಡಿ ಧೈರ್ಯ ತುಂಬುವ ಕಾರ್ಯ ಮಾಡುತ್ತಿದ್ದಾರೆ. ಲೀಲಾವತಿ ಪುತ್ರ ವಿನೋದ್ ರಾಜ್ ಅವರಿಗೂ ಧೈರ್ಯ ತುಂಬುವ ಕಾರ್ಯ ಮಾಡುತ್ತಿದ್ದಾರೆ. ಇಂದು ಬೆಳಿಗ್ಗೆಯಷ್ಟೆ ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿಯ ಲೀಲಾವತಿ ಅವರ ನಿವಾಸಕ್ಕೆ ನಟ ದರ್ಶನ್ ಭೇಟಿ ನೀಡಿದ್ದರು. ಈಗ ನಟ ಅಭಿಷೇಕ್ ಅಂಬರೀಶ್ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್

