ಹಿರಿಯ ನಟಿ ಲೀಲಾವತಿ ಮನೆಗೆ ಅಭಿಷೇಕ್ ಅಂಬರೀಶ್ ಭೇಟಿ

Updated on: Nov 26, 2023 | 11:48 PM

Abhishek Ambareesh: ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ಕ್ಷೀಣಿಸಿದ್ದು ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದಾರೆ. ನಟ ಅಭಿಷೇಕ್ ಅಂಬರೀಶ್ ಹಿರಿಯ ನಟಿಯ ಆರೋಗ್ಯ ವಿಚಾರಿಸಲು ಅವರ ಮನೆಗೆ ತೆರಳಿದ್ದರು.

ಕನ್ನಡ ಚಿತ್ರರಂಗದ (Sandalwood) ಹಿರಿಯ ನಟಿ ಲೀಲಾವತಿ (Leelavathi) ಆರೋಗ್ಯ ಕ್ಷೀಣಿಸಿದೆ. ವಯೋಸಹಜ ಸಮಸ್ಯೆಗಳಿಂದ ಅವರು ಬಳಲುತ್ತಿದ್ದಾರೆ. ಸಂಪೂರ್ಣವಾಗಿ ಹಾಸಿಗೆ ಹಿಡಿದಿರುವ ಲೀಲಾವತಿ ಅವರಿಗೆ ಮಾತನಾಡಲು ಕಷ್ಟವಾಗುತ್ತಿದೆ. ಚಿತ್ರರಂಗದ ಮಂದಿ ಹಿರಿಯ ನಟಿಯ ಆರೋಗ್ಯದ ಬಗ್ಗೆ ಆತಂಕಿತರಾಗಿದ್ದು ಒಬ್ಬರ ಹಿಂದೊಬ್ಬರಂತೆ ಆಗಮಿಸಿ ಹಿರಿಯ ನಟಿಯ ಭೇಟಿ ಮಾಡಿ ಧೈರ್ಯ ತುಂಬುವ ಕಾರ್ಯ ಮಾಡುತ್ತಿದ್ದಾರೆ. ಲೀಲಾವತಿ ಪುತ್ರ ವಿನೋದ್ ರಾಜ್ ಅವರಿಗೂ ಧೈರ್ಯ ತುಂಬುವ ಕಾರ್ಯ ಮಾಡುತ್ತಿದ್ದಾರೆ. ಇಂದು ಬೆಳಿಗ್ಗೆಯಷ್ಟೆ ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿಯ ಲೀಲಾವತಿ ಅವರ ನಿವಾಸಕ್ಕೆ ನಟ ದರ್ಶನ್ ಭೇಟಿ ನೀಡಿದ್ದರು. ಈಗ ನಟ ಅಭಿಷೇಕ್ ಅಂಬರೀಶ್ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More