VIDEO: ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಮೈದಾನದಲ್ಲೇ ಅಭಿಷೇಕ್ – ದಿಗ್ವೇಶ್ ಕಿತ್ತಾಟ
IPL 2025 LSG vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 205 ರನ್ ಕಲೆಹಾಕಿತು. ಈ ಗುರಿಯನ್ನು ಸನ್ರೈಸರ್ಸ್ ಹೈದರಾಬಾದ್ ತಂಡವು 18.2 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಎಲ್ಎಸ್ಜಿ ತಂಡ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನ 61ನೇ ಪಂದ್ಯವು ಯುವ ಆಟಗಾರರಿಬ್ಬರ ಜಗಳಕ್ಕೆ ಸಾಕ್ಷಿಯಾಗಿದೆ. ಲಕ್ನೋನ ಏಕಾನ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಎಸ್ಆರ್ಹೆಚ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡಿದ ಬಳಿಕ ಎಲ್ಎಸ್ಜಿ ಸ್ಪಿನ್ನರ್ ದಿಗ್ವೇಶ್ ರಾಥಿ, ನಿನ್ನಿಂದ ಆಗಲ್ಲ… ಹೋಯ್ತಾ ಇರು ಎಂದು ಕೈ ಸನ್ನೆ ಮಾಡಿದ್ದರು. ಇದಾದ ಬಳಿಕ ನೋಟ್ ಬುಕ್ ಸೆಲೆಬ್ರೇಷನ್ನೊಂದಿಗೆ ಬೀಳ್ಕೊಟ್ಟರು.
ದಿಗ್ವೇಶ್ ನಡೆಯಿಂದ ಕುಪಿತಗೊಂಡ ಅಭಿಷೇಕ್ ಶರ್ಮಾ ವಾಕ್ಸಮರಕ್ಕೆ ಇಳಿದಿದ್ದಾರೆ. ಅತ್ತ ಕಡೆಯಿಂದ ದಿಗ್ವೇಶ್ ಕೂಡ ಮಾತಿನ ಚಕಮಕಿ ನಡೆಸಲು ಮುಂದಾದರು. ಇಬ್ಬರ ನಡುವಣ ಜಗಳವು ತಾರಕ್ಕೇರುತ್ತಿದ್ದಂತೆ ಅಂಪೈರ್ ಹಾಗೂ ಸಹ ಆಟಗಾರರು ಮಧ್ಯ ಪ್ರವೇಶಿಸಿದರು. ಇದಾಗ್ಯೂ ಕೋಪ ತಣ್ಣಗಾಗದ ಅಭಿಷೇಕ್ ಶರ್ಮಾ, ನಿನ್ನ ಜುಟ್ಟು ಹಿಡಿದು ಹೊಡಿತೀನಿ ಎಂದು ವಾರ್ನಿಂಗ್ ನೀಡುವ ಮೂಲಕ ಮೈದಾನದಿಂದ ಹೊರನಡೆದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 205 ರನ್ ಕಲೆಹಾಕಿತು. ಈ ಗುರಿಯನ್ನು ಸನ್ರೈಸರ್ಸ್ ಹೈದರಾಬಾದ್ ತಂಡವು 18.2 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

