AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs CSK: ಈ ಆವೃತ್ತಿಯ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

SRH vs CSK: ಈ ಆವೃತ್ತಿಯ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

ಪೃಥ್ವಿಶಂಕರ
|

Updated on: Apr 18, 2026 | 8:59 PM

Share

Abhishek Sharma's Fastest IPL Fifty: ಐಪಿಎಲ್ 2026ರ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಅಭಿಷೇಕ್ ಶರ್ಮಾ ಕೇವಲ 15 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ದಾಖಲೆ ನಿರ್ಮಿಸಿದರು. ತಮ್ಮದೇ ಹಿಂದಿನ 16 ಎಸೆತಗಳ ದಾಖಲೆಯನ್ನು ಮುರಿದು, 5 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ ಕೇವಲ 9 ಎಸೆತಗಳಲ್ಲಿ 44 ರನ್ ಕಲೆಹಾಕಿ, ತಂಡಕ್ಕೆ ಪ್ರಮುಖ ಕೊಡುಗೆ ನೀಡಿದರು.

ಐಪಿಎಲ್ 2026 ರ 27 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ಅಭಿ ಅವರ ಈ ಅರ್ಧಶತಕದ ಇನ್ನಿಂಗ್ಸ್​ನಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಅಂದರೆ, ಅವರು ಕೇವಲ 9 ಎಸೆತಗಳಲ್ಲಿ 44 ರನ್ ಗಳಿಸಿದರು. ಉಳಿದ ಆರು ಎಸೆತಗಳಲ್ಲಿ ಆರು ರನ್‌ ಕಲೆಹಾಕಿ ತಮ್ಮ ಅರ್ಧಶತಕ ಪೂರೈಸಿದರು.

ಇದರೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ಪರ ಅತಿ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾತ್ರವಲ್ಲದೆ ಈ ಹಿಂದೆ ತಮ್ಮ ಹೆಸರಿನಲ್ಲಿದ್ದ ದಾಖಲೆಯನ್ನು ಸಹ ಮುರಿದಿದ್ದಾರೆ. 2024 ರಲ್ಲಿ, ಮುಂಬೈ ಇಂಡಿಯನ್ಸ್ ವಿರುದ್ಧ ಅಭಿಷೇಕ್ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಭಿಷೇಕ್ ದಾಖಲೆ ನಿರ್ಮಿಸಿದ್ದಾರೆ. ಅಂತಿಮವಾಗಿ ಅಭಿಷೇಕ್ ಶರ್ಮಾ 22 ಎಸೆತಗಳಲ್ಲಿ 59 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us