SRH vs PBKS: ಭಾರತದಲ್ಲಿ ವಿಶೇಷ ತ್ರಿಶತಕ ಪೂರೈಸಿದ ಅಭಿಷೇಕ್ ಶರ್ಮಾ

Updated on: May 06, 2026 | 9:54 PM

Abhishek Sharma's Record: ಐಪಿಎಲ್ 2026ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಅಭಿಷೇಕ್ ಶರ್ಮಾ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 13 ಎಸೆತಗಳಲ್ಲಿ 35 ರನ್ ಗಳಿಸಿ ಮಿಂಚಿದರು. ಈ ಇನ್ನಿಂಗ್ಸ್‌ನಲ್ಲಿ 4 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ, ಅವರು ಭಾರತದಲ್ಲಿ ಟಿ20 ಕ್ರಿಕೆಟ್‌ನಲ್ಲಿ 300 ಸಿಕ್ಸರ್‌ಗಳನ್ನು ಬಾರಿಸಿದ ಐದನೇ ಭಾರತೀಯ ಕ್ರಿಕೆಟಿಗ ಎನಿಸಿಕೊಂಡರು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ಈ ಸಾಧನೆ ಮಾಡಿದ ಇತರ ಆಟಗಾರರು.

ಐಪಿಎಲ್ 2026 ರ49ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 35 ರನ್ ಬಾರಿಸಿದರು. ಇದರಲ್ಲಿ 4 ಸಿಕ್ಸರ್ ಮತ್ತು 2 ಬೌಂಡರಿಗಳು ಸೇರಿದ್ದವು. ಈ ನಾಲ್ಕು ಸಿಕ್ಸರ್​ಗಳ ಮೂಲಕ ಅಭಿಷೇಕ್ ಭಾರತದಲ್ಲಿ ಟಿ20 ಕ್ರಿಕೆಟ್​ನಲ್ಲಿ 300 ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ಐದನೇ ಕ್ರಿಕೆಟಿಗ ಎಂಬ ಸಾಧನೆಯನ್ನು ಮಾಡಿದರು.

ಅಭಿಷೇಕ್​ಗೂ ಮೊದಲು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ಭಾರತದಲ್ಲಿ ಟಿ20 ಕ್ರಿಕೆಟ್​ನಲ್ಲಿ 300 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಸಾಧನೆ ಮಾಡಿದ್ದಾರೆ. ಭಾರತದಲ್ಲಿ 320 ಟಿ20 ಪಂದ್ಯಗಳಲ್ಲಿ 388 ಸಿಕ್ಸರ್ ಬಾರಿಸಿರುವ ರೋಹಿತ್ ಎಲೈಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಭಿಷೇಕ್ ಭಾರತದಲ್ಲಿ ಕೇವಲ 153 ಪಂದ್ಯಗಳಲ್ಲಿ ಟಿ20ಯಲ್ಲಿ 300 ಸಿಕ್ಸರ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

Follow Us