VIDEO: ಲಾಂಗ್ ಲಾಂಗ್ ಲಾಂಗೆಸ್ಟ್: ಐಪಿಎಲ್ನ ಬಿಗ್ಗೆಸ್ಟ್ ಸಿಕ್ಸ್ ಸಿಡಿಸಿದ ಅಭಿಷೇಕ್ ಶರ್ಮಾ
IPL 2025 SRH vs PBKS: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ 247 ರನ್ ಬಾರಿಸಿ 8 ವಿಕೆಟ್ಗಳ ಜಯ ಸಾಧಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಅತೀ ದೂರದ ಸಿಕ್ಸ್ ಸಿಡಿಸಿದ ದಾಖಲೆ ಸನ್ರೈಸರ್ಸ್ ಹೈದರಾಬಾದ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ (Abhishek Sharma) ಪಾಲಾಗಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ನ 27ನೇ ಪಂದ್ಯದಲ್ಲಿ ಅಭಿಷೇಕ್ ಬರೋಬ್ಬರಿ 106 ಮೀಟರ್ ಉದ್ದದ ಸಿಕ್ಸ್ ಬಾರಿಸಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದ 10ನೇ ಓವರ್ನ 2ನೇ ಎಸೆತದಲ್ಲಿ ಅಭಿಷೇಕ್ ಶರ್ಮಾ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದರು. ಈ ಸಿಕ್ಸ್ನೊಂದಿಗೆ ಐಪಿಎಲ್ 2025 ರಲ್ಲಿ ಅತೀ ದೂರದ ಸಿಕ್ಸ್ ಸಿಡಿಸಿದ ಹೆಗ್ಗಳಿಕೆಯನ್ನು ಅಭಿ ತನ್ನದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಆರ್ಸಿಬಿ ತಂಡದ ಫಿಲ್ ಸಾಲ್ಟ್ ಹೆಸರಿನಲ್ಲಿತ್ತು.
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಫಿಲ್ ಸಾಲ್ಟ್ ಬರೋಬ್ಬರಿ 105 ಮೀಟರ್ ಉದ್ದದ ಸಿಕ್ಸರ್ ಸಿಡಿಸಿದ್ದರು. ಇದೀಗ ಮಾರ್ಕೊ ಯಾನ್ಸೆನ್ ಎಸೆತದಲ್ಲಿ 106 ಮೀಟರ್ ದೂರದ ಸಿಕ್ಸ್ನೊಂದಿಗೆ ಅಭಿಷೇಕ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 245 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ 55 ಎಸೆತಗಳಲ್ಲಿ 10 ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ 141 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ 247 ರನ್ ಬಾರಿಸಿ 8 ವಿಕೆಟ್ಗಳ ಜಯ ಸಾಧಿಸಿದೆ.

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
