ಎಸಿಬಿಯನ್ನು ರದ್ದು ಮಾಡಿದ್ದು ಸ್ವಾಗತಾರ್ಹ, ಆದರೆ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಬೇಕು: ವೀರಪ್ಪ ಮೊಯ್ಲಿ
ಅದನ್ನು ರದ್ದು ಮಾಡಿದ್ದು ಅತ್ಯಂತ ಸೂಕ್ತವಾಗಿದೆ ಮತ್ತು ಲೋಕಾಯುಕ್ತಕ್ಕೆ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಕ ಮಾಡಿ ಅದನ್ನು ಬಲಪಡಿಸಬೇಕಾದ ಅಗತ್ಯವಿದೆ ಎಂದರು.
ಚಿಕ್ಕಬಳ್ಳಾಪುರ: ರಾಜ್ಯ ಉಚ್ಚ ನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಮಾಡಿ ಹೊರಡಿಸಿರುವ ಆದೇಶವನ್ನು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಸ್ವಾಗತಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಮೊಯ್ಲಿ ಭ್ರಷ್ಟಾಚಾರದ (graft) ಕೆಲ ಪ್ರಕರಣಗಳನ್ನು ಎಸಿಬಿ (ACB) ನಿರ್ವಹಿಸುವುದು ಸಾಧ್ಯವಿರಲಿಲ್ಲ, ಹಾಗಾಗಿ ಅದನ್ನು ರದ್ದು ಮಾಡಿದ್ದು ಅತ್ಯಂತ ಸೂಕ್ತವಾಗಿದೆ ಮತ್ತು ಲೋಕಾಯುಕ್ತಕ್ಕೆ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಕ ಮಾಡಿ ಅದನ್ನು ಬಲಪಡಿಸಬೇಕಾದ ಅಗತ್ಯವಿದೆ ಎಂದರು.