ನಡಿ ಎಂದ ಪಾಕ್ ಸ್ಪಿನ್ನರ್… ಗುರಾಯಿಸಿದ ಶುಭ್ಮನ್ ಗಿಲ್
IND vs PAK: ದುಬೈನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್ ಕಲೆಹಾಕಿದರೆ, ಭಾರತ ತಂಡವು 42.3 ಓವರ್ಗಳಲ್ಲಿ 244 ರನ್ ಬಾರಿಸಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ಗೇರುವುದು ಬಹುತೇಕ ಖಚಿತವಾಗಿದೆ.
ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಪಾಕಿಸ್ತಾನ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಶುಭ್ಮನ್ ಗಿಲ್ ಅವರನ್ನು ಕೆಣಕಿದ್ದಾರೆ. ಅದು ಸಹ ಕ್ಲೀನ್ ಬೌಲ್ಡ್ ಮಾಡಿದ ಬಳಿಕ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್ಗಳಲ್ಲಿ 241 ರನ್ ಕಲೆಹಾಕಿತು.
ಈ ಗುರಿ ಬೆನ್ನತ್ತಲು ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರು. 20 ರನ್ಗಳಿಸಿ ರೋಹಿತ್ ಶರ್ಮಾ ಔಟಾದರೆ, ಶುಭ್ಮನ್ ಗಿಲ್ ವಿರಾಟ್ ಕೊಹ್ಲಿ ಜೊತೆಗೂಡಿ ತಂಡಕ್ಕೆ ಆಸರೆಯಾಗಿ ನಿಂತಿದ್ದರು. ಅಲ್ಲದೆ 52 ಎಸೆತಗಳಲ್ಲಿ 7 ಫೋರ್ಗಳೊಂದಿಗೆ 46 ರನ್ ಬಾರಿಸಿದ್ದರು.
ಈ ಹಂತದಲ್ಲಿ ಅಬ್ರಾರ್ ಅಹ್ಮದ್ 17ನೇ ಓವರ್ನ 3ನೇ ಎಸೆತದಲ್ಲಿ ಶುಭ್ಮನ್ ಗಿಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ್ದಾರೆ. ಇತ್ತ ಚೆಂಡು ಗುರುತಿಸುವಲ್ಲಿ ಎಡವಿದ ಗಿಲ್ ಔಟಾಗಿ ಮೈದಾನ ತೊರೆಯುತ್ತಿದ್ದರೆ, ಅತ್ತ ಅಬ್ರಾರ್ ಅಹ್ಮದ್ ಟೀಮ್ ಇಂಡಿಯಾ ಆಟಗಾರನಿಗೆ ಕಣ್ ಸನ್ನೆಯ ಮೂಲಕ ನಡಿ ಎಂದಿದ್ದಾರೆ.
ಅಬ್ರಾರ್ ಅಹ್ಮದ್ ಅವರ ಈ ನಡಿ ಸೂಚನೆಗೆ ಕೋಪಗೊಂಡ ಶುಭ್ಮನ್ ಗಿಲ್ ಪಾಕ್ ಸ್ಪಿನ್ನರ್ನನ್ನು ಗುರಾಯಿಸಿದ್ದಾರೆ. ಇದೀಗ ಅಬ್ರಾರ್ ಅಹ್ಮದ್ ಅವರ ವಿಚಿತ್ರ ಸೆಲೆಬ್ರೆಷನ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳು ಶುರುವಾಗಿದೆ.
ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ್ ನೀಡಿದ 242 ರನ್ಗಳ ಗುರಿಯನ್ನು ಟೀಮ್ ಇಂಡಿಯಾ 42.3 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್ಎ ಕಚೇರಿಗೆ ನುಗ್ಗಿ ಕಳ್ಳತನ

ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್

ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್ನಲ್ಲಿ ಸಂಭ್ರಮಾಚರಣೆ

ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
