ಟಿಮ್ ಡೇವಿಡ್ ಸಿಡಿಲಬ್ಬರ… ಆದರೂ ಸೋತ ಬುಲ್ಸ್ ಪಡೆ
Abu Dhabi T10: 142 ರನ್ಗಳ ಕಠಿಣ ಗುರಿ ಬೆನ್ನತ್ತಿದ ಯುಎಇ ಬುಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 48 ರನ್ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಏಕಾಂಗಿ ಹೋರಾಟಕ್ಕೆ ಕೈ ಹಾಕಿದರು.
ಯುಎಇನ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಅಬುಧಾಬಿ ಟಿ10 ಲೀಗ್ನ 2ನೇ ಪಂದ್ಯದಲ್ಲಿ ಟಿಮ್ ಡೇವಿಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಸಿಡಿಲಬ್ಬರದ ಹೊರತಾಗಿಯೂ ಈ ಪಂದ್ಯದಲ್ಲಿ ಯುಎಇ ಬುಲ್ಸ್ ತಂಡ ಸೋಲನುಭವಿಸಿದೆ. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಡೆಕ್ಕನ್ ಗ್ಲಾಡಿಯೇಟರ್ಸ್ ಪರ ಇಂಗ್ಲೆಂಡ್ನ ಟಾಮ್ ಕೊಹ್ಲರ್-ಕ್ಯಾಡ್ಮೋರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.
ಆರಂಭಿಕನಾಗಿ ಕಣಕ್ಕಿಳಿದ ಟಾಮ್ ಕೊಹ್ಲರ್-ಕ್ಯಾಡ್ಮೋರ್ 29 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಅಜೇಯ 78 ರನ್ ಬಾರಿಸಿದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಡೆಕ್ಕನ್ ಗ್ಲಾಡಿಯೇಟರ್ಸ್ ತಂಡವು 10 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿತು.
142 ರನ್ಗಳ ಕಠಿಣ ಗುರಿ ಬೆನ್ನತ್ತಿದ ಯುಎಇ ಬುಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 48 ರನ್ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಏಕಾಂಗಿ ಹೋರಾಟಕ್ಕೆ ಕೈ ಹಾಕಿದರು.
ತಾನೆದುರಿಸಿದ ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಟಿಮ್ ಡೇವಿಡ್ 29 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ ಅಜೇಯ 59 ರನ್ ಸಿಡಿಸಿದರು. ಆದರೆ ಇನ್ನೊಂದು ತುದಿಯಲ್ಲಿ ಡೇವಿಡ್ಗೆ ಉತ್ತಮ ಸಾಥ್ ಸಿಕ್ಕಿರಲಿಲ್ಲ. ಪರಿಣಾಮ ಯುಎಇ ಬುಲ್ಸ್ ತಂಡವು 10 ಓವರ್ಗಳಲ್ಲಿ 135 ರನ್ಗಳಿಸಿ 6 ರನ್ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.
ಡೆಕ್ಕನ್ ಗ್ಲಾಡಿಯೇಟರ್ಸ್ ಪ್ಲೇಯಿಂಗ್ 11: ಟಾಮ್ ಕೊಹ್ಲರ್-ಕ್ಯಾಡ್ಮೋರ್ , ಮಾರ್ಕಸ್ ಸ್ಟೊಯಿನಿಸ್ , ನಿಕೋಲಸ್ ಪೂರನ್ (ನಾಯಕ) , ಆ್ಯಂಡ್ರೆ ರಸೆಲ್ , ಲಾರಿ ಇವಾನ್ಸ್ , ಲ್ಯೂಕ್ ವುಡ್ , ಡೇವಿಡ್ ವೀಝ, ಅಜಯ್ ಕುಮಾರ್ , ಅಕೇಲ್ ಹೊಸೈನ್ , ರಿಚರ್ಡ್ ಗ್ಲೀಸನ್ , ಇಬ್ರಾರ್ ಅಹ್ಮದ್ , ಲಹಿರು ಕುಮಾರ.
ಯುಎಇ ಬುಲ್ಸ್ ಪ್ಲೇಯಿಂಗ್ 11: ಫಿಲ್ ಸಾಲ್ಟ್ , ಸುನಿಲ್ ನರೈನ್ , ರೋವ್ಮನ್ ಪೊವೆಲ್ , ಕೀರನ್ ಪೊಲಾರ್ಡ್ (ನಾಯಕ) , ಟಿಮ್ ಡೇವಿಡ್ , ಇಫ್ತಿಕಾರ್ ಅಹ್ಮದ್ , ಸಲ್ಮಾನ್ ಇರ್ಷಾದ್ , ಮೀರ್ ಹಮ್ಜಾ , ಜುನೈದ್ ಸಿದ್ದೀಕ್ , ಫರ್ಹಾನ್ ಖಾನ್ , ಫಝಲ್ಹಕ್ ಫಾರೂಕಿ , ಜೇಮ್ಸ್ ವಿನ್ಸ್.
Published on: Nov 19, 2025 01:53 PM
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

