ಮತೀಯ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅಂತ ಆಗ್ರಹಿಸುವ ಮೂಲಕ ಎಬಿವಿಪಿ ಕಾರ್ಯಕರ್ತರು ನನ್ನ ಕಣ್ಣು ತೆರೆಸಿದ್ದಾರೆ: ಗೃಹ ಸಚಿವ

ಮತೀಯ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅಂತ ಆಗ್ರಹಿಸುವ ಮೂಲಕ ಎಬಿವಿಪಿ ಕಾರ್ಯಕರ್ತರು ನನ್ನ ಕಣ್ಣು ತೆರೆಸಿದ್ದಾರೆ: ಗೃಹ ಸಚಿವ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 30, 2022 | 2:15 PM

ಇಂಥ ಸಂಘಟನೆಗಳನ್ನು ಬ್ಯಾನ್ ಮಾಡದ ಹೊರತು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸಾಧ್ಯವಿಲ್ಲ ಎಂಬ ಗಮನ ಸೆಳೆಯುವ ಮಾತನ್ನು ಅವರು ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಬೆಂಗಳೂರು:  ಎಬಿವಿಪಿ (ABVP) ಕಾರ್ಯಕರ್ತರು ತಮ್ಮ ನಿವಾಸ ಮುಂದೆ ಪ್ರತಿಭಟನೆ ನಡೆಸಿ ಕಣ್ಣು ತೆರೆಸುವ ಪ್ರಯತ್ನ ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. ಎಸ್ ಡಿ ಪಿ ಐ (SDPI) ಮತ್ತು ಪಿಎಫ್ಐ (PFI) ಮುಂತಾದ ಮತೀಯ ಸಂಘಟನೆಗಳನ್ನು ನಿಷೇಧಿಸಬೇಕು ಅಂತ ಆಗ್ರಹಿಸಿದ್ದಾರೆ. ಇಂಥ ಸಂಘಟನೆಗಳನ್ನು ಬ್ಯಾನ್ ಮಾಡದ ಹೊರತು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸಾಧ್ಯವಿಲ್ಲ ಎಂಬ ಗಮನ ಸೆಳೆಯುವ ಮಾತನ್ನು ಅವರು ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.