ಎಬಿವಿಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿನಿಯರನ್ನ ಎಳೆದಾಡಿದ ಪೊಲೀಸರು: ಪ್ರಶ್ನಿಸಿದ ಮಾಧ್ಯಮದವರ ಮೇಲೆಯೇ ದರ್ಪ
ಕೆಪಿಎಸ್‌ಸಿ ಅಕ್ರಮ ನೇಮಕಾತಿ ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಮಾಧ್ಯಮದವರು ಇದನ್ನು ಪ್ರಶ್ನಿಸಿದಾಗ, ಪೊಲೀಸರು ಕ್ಯಾಮರಾಗಳನ್ನು ತಡೆಯಲು ಮತ್ತು ವರದಿಗಾರರ ಮೇಲೆ ದಬ್ಬಾಳಿಕೆ ಮಾಡಲು ಪ್ರಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಏಕವಚನದಲ್ಲಿಯೇ ಮಾತನಾಡಿರುವ ರೀತಿಗೆ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು, ಆಗಸ್ಟ್ 25: ಕೆಪಿಎಸ್‌ಸಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆ ಮೌರ್ಯ ವೃತ್ತದಿಂದ ವಿಧಾನಸೌಧದವರೆಗೂ ಸಾಗಲು ಯತ್ನಿಸಿದಾಗ ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಅವಮಾನಕಾರಿಯಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನಾಕಾರರನ್ನು ಬಸ್‌ಗಳಿಗೆ ಹತ್ತಿಸುವಾಗ ಮಹಿಳಾ ಸಿಬ್ಬಂದಿ ಇಲ್ಲದೆ ಪುರುಷ ಪೊಲೀಸರೇ ವಿದ್ಯಾರ್ಥಿನಿಯರನ್ನು ಎಳೆದಾಡಿದ್ದಾರೆ. ಇದನ್ನು ಮಾಧ್ಯಮಗಳ ವರದಿಗಾರರು ಪ್ರಶ್ನಿಸಿದಾಗ ಪೊಲೀಸರು ಉದ್ಧಟತನದಿಂದ ವರ್ತಿಸಿದ್ದು, ಕ್ಯಾಮರಾಗಳನ್ನು ತಡೆಯಲು ಪ್ರಯತ್ನಿಸಿದ್ದಾರೆ. ಅಲ್ಲದೆ ಮಾಧ್ಯಮಗಳ ಸಿಬ್ಬಂದಿಯ ಜೊತೆಗೆ ಏಕವಚನದಲ್ಲಿ ಮಾತನಾಡಿ ದರ್ಪ ಮೆರೆದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 25, 2026 02:07 PM
Loading...
Unable to load recommendations.
Follow Us
