ಅಜೀಂ ಪ್ರೇಮ್ ಜಿ ವಿವಿಯಲ್ಲಿ ದೇಶ ವಿರೋಧಿ ಚಟುವಟಿಕೆ ಆರೋಪ: ಎಬಿವಿಪಿ ಪ್ರತಿಭಟನೆ, ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಸಂಘಟನೆ ಭಾರತೀಯ ಸೈನಿಕರಿಗೆ ಅಪಮಾನ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸಿದೆ ಎಂದು ಎಬಿವಿಪಿ ಆಪಾದಿಸಿದೆ. ವಿವಿಯ ಮಾನ್ಯತೆ ರದ್ದುಪಡಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಬಿವಿಪಿ ಪತ್ರ ಬರೆದಿದೆ.
ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಸಂಘಟನೆಗಳು ಭಾರತೀಯ ಸೈನಿಕರಿಗೆ ಅಪಮಾನ ಮಾಡುವಂಥ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಎಬಿವಿಪಿ ಆರೋಪಿಸಿದೆ.
ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಮಧ್ಯಪ್ರವೇಶಿಸಿ, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಸ್ಪಾರ್ಕ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ವಿಶ್ವವಿದ್ಯಾಲಯ ಕ್ಷಮೆಯಾಚಿಸಬೇಕು ಎಂದು ಎಬಿವಿಪಿ ಆಗ್ರಹಿಸಿತು. ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಬಿವಿಪಿ ಪತ್ರ ಬರೆದಿದೆ.
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ

