ಅಜೀಂ ಪ್ರೇಮ್ ಜಿ ವಿವಿಯಲ್ಲಿ ದೇಶ ವಿರೋಧಿ ಚಟುವಟಿಕೆ ಆರೋಪ: ಎಬಿವಿಪಿ ಪ್ರತಿಭಟನೆ, ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ

Updated on: Feb 25, 2026 | 7:43 AM

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಸಂಘಟನೆ ಭಾರತೀಯ ಸೈನಿಕರಿಗೆ ಅಪಮಾನ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸಿದೆ ಎಂದು ಎಬಿವಿಪಿ ಆಪಾದಿಸಿದೆ. ವಿವಿಯ ಮಾನ್ಯತೆ ರದ್ದುಪಡಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಬಿವಿಪಿ ಪತ್ರ ಬರೆದಿದೆ.

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಸಂಘಟನೆಗಳು ಭಾರತೀಯ ಸೈನಿಕರಿಗೆ ಅಪಮಾನ ಮಾಡುವಂಥ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಎಬಿವಿಪಿ ಆರೋಪಿಸಿದೆ.

ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಮಧ್ಯಪ್ರವೇಶಿಸಿ, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಸ್ಪಾರ್ಕ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ವಿಶ್ವವಿದ್ಯಾಲಯ ಕ್ಷಮೆಯಾಚಿಸಬೇಕು ಎಂದು ಎಬಿವಿಪಿ ಆಗ್ರಹಿಸಿತು. ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಬಿವಿಪಿ ಪತ್ರ ಬರೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More