Video: ನೇಪಾಳಕ್ಕೆ ವಾಪಸ್ ಹೊರಟು ನಿಂತ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ

|

Updated on: Feb 19, 2025 | 10:07 AM

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯ ಹಾಸ್ಟೆಲ್‌ನಲ್ಲಿ ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಳಿಕ ಆತಂಕಗೊಂಡಿರುವ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಮರಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಸದಸ್ಯರು ಭಾರತದಲ್ಲಿ ನೀವು ಸುರಕ್ಷಿತವಾಗಿರುತ್ತೀರಿ ಎಂದು ಹೇಳುತ್ತಾ ಮನವೊಲಿಸುವ ಕೆಲಸ ಮಾಡುತ್ತಿದೆ. ಕೆಐಐಟಿ ವಿಶ್ವವಿದ್ಯಾಲಯದ ನೇಪಾಳಿ ವಿದ್ಯಾರ್ಥಿಗಳಿಗೆ ಆಹಾರ ಮತ್ತು ಇತರ ಅಗತ್ಯ ಸಹಾಯವನ್ನು ಒದಗಿಸಲು ಎಬಿವಿಪಿ ಸದಸ್ಯರು ಮುಂದೆ ಬಂದಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯ ಹಾಸ್ಟೆಲ್‌ನಲ್ಲಿ ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಳಿಕ ಆತಂಕಗೊಂಡಿರುವ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಮರಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಸದಸ್ಯರು ಭಾರತದಲ್ಲಿ ನೀವು ಸುರಕ್ಷಿತವಾಗಿದ್ದೀರಿ ಅದರ ಬಗ್ಗೆ ಭಯ ಬೇಡ ಎಂದು ಹೇಳುತ್ತಾ ಮನವೊಲಿಸುವ ಕೆಲಸ ಮಾಡುತ್ತಿದೆ. ಕೆಐಐಟಿ ವಿಶ್ವವಿದ್ಯಾಲಯದ ನೇಪಾಳಿ ವಿದ್ಯಾರ್ಥಿಗಳಿಗೆ ಆಹಾರ ಮತ್ತು ಇತರ ಅಗತ್ಯ ಸಹಾಯವನ್ನು ಒದಗಿಸಲು ಎಬಿವಿಪಿ ಸದಸ್ಯರು ಮುಂದೆ ಬಂದಿದ್ದಾರೆ.

ಉತ್ತರ ಪ್ರದೇಶ ಮತ್ತು ಬಿಹಾರದ ಗೋರಖ್‌ಪುರ, ರಕ್ಸೌಲ್, ಮುಜಫರ್, ಪಾಟ್ನಾ ಮುಂತಾದ ವಿವಿಧ ಜಿಲ್ಲೆಗಳಲ್ಲಿರುವ ನೇಪಾಳಿ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುತ್ತಿದ್ದಾರೆ. ನೆರೆಯ ಜಿಲ್ಲೆಗಳಾದ ಉತ್ತರ ಪ್ರದೇಶ ಮತ್ತು ಬಿಹಾರದ ನಿಲ್ದಾಣಗಳಲ್ಲಿ, ಎಬಿವಿಪಿ ಸದಸ್ಯರು ಈ ನೇಪಾಳಿ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಅವರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಭರವಸೆ ನೀಡಿದ್ದಾರೆ.

ಫೆಬ್ರವರಿ 16 ರಂದು ಕೆಐಐಟಿ ವಿಶ್ವವಿದ್ಯಾಲಯದಲ್ಲಿ ನೇಪಾಳಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ದುರದೃಷ್ಟಕರ ಘಟನೆಯ ನಂತರ, ಅಲ್ಲಿ ಬಿ.ಟೆಕ್ ಓದುತ್ತಿರುವ ಅನೇಕ ನೇಪಾಳಿ ವಿದ್ಯಾರ್ಥಿನಿಯರು ತಮ್ಮ ಮನೆಗಳಿಗೆ ಮರಳುತ್ತಿದ್ದಾರೆ.

ನೇಪಾಳಿ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಳಿಂಗ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯ (ಕೆಐಐಟಿ) ಐವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಇವರಲ್ಲಿ ಸಂಸ್ಥೆಯ ಮೂವರು ನಿರ್ದೇಶಕರು ಹಾಗೂ ಇಬ್ಬರು ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಅದೇ ಸಮಯದಲ್ಲಿ, ಪೊಲೀಸರು ನೇಪಾಳಿ ವಿದ್ಯಾರ್ಥಿನಿಯ ಗೆಳೆಯನನ್ನು ಬಂಧಿಸಿದ್ದಾರೆ. ಭಾರತೀಯ ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ತನಗೆ ತುಂಬಾ ಹಿಂಸೆ ನೀಡಿದ್ದಾರೆ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಹಾಸ್ಟೆಲ್‌ನಲ್ಲಿ ನೇಪಾಳಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು ಈ ಸಂಬಂಧ ನೇಪಾಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ ನಂತರ ನ್ಯಾಯಕ್ಕಾಗಿ ಆಗ್ರಹಿಸಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು KIIT ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರಿಂದ ಕುಪಿತಗೊಂಡ KIIT ಆಡಳಿತ ಮಂಡಳಿ, ಪ್ರತಿಭಟನೆ ನಡೆಸಲು ಮುಂದಾದ ನೇಪಾಳಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಖಾಲಿ ಮಾಡಿಸಿ ಹೊರಹಾಕಿದ್ದಾರೆ.

ಇದರಿಂದ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ನೇಪಾಳಿ ವಿದ್ಯಾರ್ಥಿಗಳ ಮೇಲೆ ಆಡಳಿತ ಮಂಡಳಿ ದೌರ್ಜನ್ಯ ಎಸಗುತ್ತಿದೆ ಎಂದು ಮೃತ ವಿದ್ಯಾರ್ಥಿನಿಯ ತಂದೆ ಗಂಭೀರ ಆರೋಪ ಮಾಡಿದ್ದಾರೆ. ಈ ಖಾಸಗಿ ಎಂಜಿನಿಯರಿಂಗ್ ಸಂಸ್ಥೆ ನೇಪಾಳದ ವಿದ್ಯಾರ್ಥಿಗಳೊಂದಿಗೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಅವರು ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ