ಎಬಿವಿಪಿ ರಥಯಾತ್ರೆ ವೇಳೆ ಪರಮೇಶ್ವರ್ ಪುಷ್ಪಾರ್ಚನೆ! ಸಚಿವರು ಹೇಳಿದ್ದೇನು ನೋಡಿ

Updated on: Sep 11, 2025 | 11:40 AM

ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಸುತ್ತ ಇದೀಗ ಹೊಸದೊಂದು ವಿವಾದ ಸುತ್ತಿಕೊಂಡಿದೆ. ಆದರೆ, ಖುದ್ದು ಅವರೇ ಸ್ಪಷ್ಟೀಕರಣ ನೀಡಿ ಅದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.. ಅಲ್ಲದೆ, ಎಬಿವಿಪಿಯ ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ ಎಂದಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ನೀಡಿರುವ ಸ್ಪಷ್ಟನೆ ಏನು? ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಸೆಪ್ಟೆಂಬರ್ 11: ತುಮಕೂರಿನಲ್ಲಿ ಎಬಿವಿಪಿ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಭಾಗಿಯಾಗಿದ್ದಾರೆ ಎಂಬ ವರದಿಗಳ ಬಗ್ಗೆ ಖುದ್ದು ಅವರೇ ಇದೀಗ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ನಾನು ಬರುವ ದಾರಿಯಲ್ಲಿ ರಾಣಿ ಅಬ್ಬಕ್ಕ ಮೆರವಣಿಗೆ ಬರುತ್ತಿತ್ತು. ಸ್ಥಳೀಯ ಶಾಸಕ ಷಡಕ್ಷರಿ ಹಾಗೂ ನಾನು ಒಟ್ಟಿಗೆ ಇದ್ದೆವು. ಅವರು ಕರೆದು ಹೂವು ಹಾಕಿ ಅಂದರು. ರಾಣಿ ಅಬ್ಬಕ್ಕ ಮೆರವಣಿಗೆ ಆದ್ದರಿಂದ ಹೂವು ಹಾಕಿದೆ ಅಷ್ಟೆ ಎಂದರು.

ನಾನು ಯಾವುದೇ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಇದರ ಮೇಲೆ ಯಾರಾದರೂ ವಿವಾದ ಮಾಡಿದರೆ ಮಾಡಿಕೊಳ್ಳಲಿ, ನನಗೇನು ತೊಂದರೆ ಇಲ್ಲ. ನಾನು ಕಾಂಗ್ರೆಸ್ಸಿಗ, ಕಾಂಗ್ರೆಸ್ಸಿಗನಾಗಿಯೇ ನಾನು ಸಾಯುತ್ತೇನೆ. ನಮಗೂ ರಾಜಕೀಯ ವಿರೋಧಿಗಳು ಇರುತ್ತಾರೆ. ಅದು ಪಕ್ಷದ ಒಳಗೂ ಇರಬಹುದು, ಪಕ್ಷದ ಹೊರಗೂ ಇರಬಹುದು. ಪರಮೇಶ್ವರ್ ಏನು ಎಂಬುದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. 35 ವರ್ಷಗಳಿಂದ ನನ್ನ ರಾಜಕೀಯ ಏನು ಎಂಬುದು ಗೊತ್ತಿದೆ. ಅದನ್ನು ಪದೇಪದೆ ಸಾಬೀತು ಮಾಡಬೇಕಾಗಿಲ್ಲ ಎಂದು ಪರಮೇಶ್ವರ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 11, 2025 11:33 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More