ವಾರ್ಸಿಟಿಗಳನ್ನು ಮುಚ್ಚುವ ನಿರ್ಧಾರ ವಿರೋಧಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆಮುಂದೆ ಎಬಿವಿಪಿ ಪ್ರದರ್ಶನ
ಬಿಜೆಪಿ ಸರ್ಕಾರವು ಅಧಿಕಾರದಲ್ಲಿದ್ದಾಗ ಮತ್ತು ಡಾ ಸಿಎನ್ ಅಶ್ವಥ್ ನಾರಾಯಣ ಉನ್ನತ ಶಿಕ್ಷಣ ಖಾತೆ ಸಚಿವರಾಗಿದ್ದಾಗ ಅರಂಭಿಸಲಾದ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ವಿಶ್ವವಿದ್ಯಾಲಯ ಅನುದಾನ ಅಯೋಗದ ಸುಪರ್ದಿಯಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ಅಷ್ಟು ಸುಲಭವಲ್ಲ ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಬೆಳಗಾವಿ, ಫೆ 27: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು (universities) ಸರ್ಕಾರ ಮುಚ್ಚಲು ನಿರ್ಧರಿಸಿರುವುದು ವಿದ್ಯಾರ್ಥಿಗಳಲ್ಲಿ ತೀವ್ರ ಅಸಮಾಧಾನ ಮತ್ತು ಬೇಸರವನ್ನುಂಟು ಮಾಡಿದೆ. ನಗರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮುಂದೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸದಸ್ಯರು ವಿನೂತನವಾಗಿ ಪ್ರದರ್ಶನ ನಡೆಸಿದರು. ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಉಳಿವಿಗಾಗಿ ಹೋರಾಟ ನಡೆಸುತ್ತಿರುವುದಾಗಿ ಹೇಳಿದ ವಿದ್ಯಾರ್ಥಿಗಳು, ಲಕ್ಷ್ಮಿ ಹೆಬ್ಬಾಳ್ಕರ್, ಸಿಎಂ ಸಿದ್ದರಾಮಯ್ಯ ಮತ್ತು ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್ ಹೆಸರುಗಳನ್ನು ಹೇಳಿ ಭವತಿ ಭಿಕ್ಷಾಂ ದೇಹಿ (mother, please give me alms) ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಬೀಗ? ಆತಂಕಕ್ಕೆ ಒಳಗಾದ ಆದಿವಾಸಿ ವಿದ್ಯಾರ್ಥಿಗಳು