ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ: ಮಹಿಳೆ ಸಾವು, 6 ಜನರಿಗೆ ಗಾಯ
ಮಂತ್ರಾಲಯದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಇನ್ನೋವಾ ಕಾರು ಲಾರಿಗೆ ಹಿಂದಿನಿಂದ ಢಿಕ್ಕಿಯಾದ ಘಟನೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಚಿಕ್ಕಬಳ್ಳಾಪುರ, ಅಕ್ಟೋಬರ್ 03: ಲಾರಿಗೆ ಹಿಂದಿನಿಂದ ಇನ್ನೋವಾ ಕಾರು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 6 ಜನರು ಗಾಯಗೊಂಡಿರುವ ಘಟನೆ ಗುಡಿಬಂಡೆ (Gudibande) ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಮೃತ ಮಹಿಳೆಯನ್ನ ಹುಲಿಯೂರು ಮೂಲದ ನಂದಿನಿ (35) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮಂತ್ರಾಲಯದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

