ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ: ಮಹಿಳೆ ಸಾವು, 6 ಜನರಿಗೆ ಗಾಯ

Updated By: ಪ್ರಸನ್ನ ಹೆಗಡೆ

Updated on: Oct 03, 2025 | 6:27 PM

ಮಂತ್ರಾಲಯದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಇನ್ನೋವಾ ಕಾರು ಲಾರಿಗೆ ಹಿಂದಿನಿಂದ ಢಿಕ್ಕಿಯಾದ ಘಟನೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಚಿಕ್ಕಬಳ್ಳಾಪುರ, ಅಕ್ಟೋಬರ್​ 03: ಲಾರಿಗೆ ಹಿಂದಿನಿಂದ ಇನ್ನೋವಾ ಕಾರು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 6 ಜನರು ಗಾಯಗೊಂಡಿರುವ ಘಟನೆ ಗುಡಿಬಂಡೆ (Gudibande) ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಮೃತ ಮಹಿಳೆಯನ್ನ ಹುಲಿಯೂರು ಮೂಲದ ನಂದಿನಿ (35) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮಂತ್ರಾಲಯದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.