AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಸುಷ್ಮಾ ಚಕ್ರೆ
|

Updated on: Dec 26, 2025 | 10:43 PM

Share

ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನ್ವೇಶ್ ಎಂಬ 20 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮುಂಬೈ, ಡಿಸೆಂಬರ್ 26: ರಸ್ತೆಗಿಳಿದ ಮೇಲೆ ಸ್ವಲ್ಪ ಯಾಮಾರಿದರೂ ಜೀವವೇ ಹೋಗುತ್ತದೆ. ಹೀಗಾಗಿ, ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ (Viral Video) ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನ್ವೇಶ್ ಎಂಬ 20 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More