ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ; ಆತಂಕಗೊಂಡ ಸ್ಥಳೀಯರು

ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ; ಆತಂಕಗೊಂಡ ಸ್ಥಳೀಯರು

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 20, 2022 | 5:53 PM

ಮಹಾರಾಷ್ಟ್ರದ ಲಾರಿಯೊಂದು ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದು, ಬಳ್ಳಾರಿಯಿಂದ ಔರಂಗಬಾದ್​ಗೆ ತೆರಳುವ ಮಾರ್ಗ ಮಧ್ಯೆ ಲಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ವಿಜಯಪುರ: ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಅಬ್ಬಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಮಹಾರಾಷ್ಟ್ರದ ಲಾರಿಯೊಂದು ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದು, ಬಳ್ಳಾರಿಯಿಂದ ಔರಂಗಬಾದ್​ಗೆ ತೆರಳುವ ಮಾರ್ಗ ಮಧ್ಯೆ ಲಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡು ಲಾರಿ ಬಹುತೇಕ ಸುಟ್ಟು ಭಸ್ಮವಾಗಿದೆ. ಲಾರಿಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಕಂಡು ಸ್ಥಳೀಯರು ಆತಂಕಗೊಂಡಿದ್ದರು. ಮಾಹಿತಿ ತಿಳಿಯುತ್ತಿದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಅಂಗಡಿಯೊಂದರಲ್ಲಿ 40 ಸಾವಿರ ಹಣ ದೋಚಿ ಕಳ್ಳ ಪರಾರಿ; ಸಿನಿಮೀಯ ಶೈಲಿಯಲ್ಲಿ ಚೇಸ್​ ಮಾಡಿದ ಪೊಲೀಸರು