ರಾಯಚೂರು: ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು
ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಕಾಲುವೆ ಬಳಿ ನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್ ಪೇದೆ(Police constable) ಗಳಾದ ಮಂಜುನಾಥ್ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.
ರಾಯಚೂರು, ಜ.09: ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಕಾಲುವೆ ಬಳಿ ನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್ ಪೇದೆ(Police constable) ಗಳಾದ ಮಂಜುನಾಥ್ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಕಾನ್ಸ್ಟೇಬಲ್ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಳಗಾನೂರ ಠಾಣೆಯಲ್ಲಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos