ಬೆಂಗಳೂರು: ಆರೋಪಿತೆ ಚೈತ್ರಾ ಕುಂದಾಪುರ ಸಾಂತ್ವನ ಕೇಂದ್ರಕ್ಕೆ ಶಿಫ್ಟ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 13, 2023 | 9:54 PM

ಬಂಧಿತ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರಿನ ಡೇರಿ ಸರ್ಕಲ್‌ ಬಳಿಯಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್‌ ಮಾಡಲಾಗಿದೆ. ಚೈತ್ರಾ ಸೇರಿ ಐವರು ಆರೋಪಿಗಳನ್ನು ಸಿಸಿಬಿ ಕಸ್ಟಡಿಗೆ ಕೋರ್ಟ್‌ ನೀಡಿತ್ತು. ಇನ್ನು ಚೈತ್ರಾ ಪರ ವಕೀಲರು ‘ಆರೋಪಿಗಳಿಗೆ ಯಾವುದೇ ನೋಟಿಸ್ ನೀಡದೆ ಬಂಧಿಸಿದ್ದಾರೆಂದು ವಿಚಾರಣೆ ವೇಳೆ ಕೋರ್ಟ್‌ಗೆ ಮಾಹಿತಿ ನೀಡಿದ್ದರು.

ಬೆಂಗಳೂರು, ಸೆ.13: ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ಪಡೆದು ವಂಚನೆ ಕೇಸ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರಿನ ಡೇರಿ ಸರ್ಕಲ್‌ ಬಳಿಯಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್‌ ಮಾಡಲಾಗಿದೆ. ಚೈತ್ರಾ ಸೇರಿ ಐವರು ಆರೋಪಿಗಳನ್ನು ಸಿಸಿಬಿ (CCB) ಕಸ್ಟಡಿಗೆ ಕೋರ್ಟ್‌ ನೀಡಿತ್ತು. ಇನ್ನು ಚೈತ್ರಾ ಪರ ವಕೀಲರು ‘ಆರೋಪಿಗಳಿಗೆ ಯಾವುದೇ ನೋಟಿಸ್ ನೀಡದೆ ಬಂಧಿಸಿದ್ದಾರೆಂದು ವಿಚಾರಣೆ ವೇಳೆ ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಸಿಆರ್‌ಪಿಸಿ 41ರಡಿ ನೋಟಿಸ್ ನೀಡಬೇಕಿತ್ತು, ಸಿಸಿಬಿ ಪೊಲೀಸರು ನಿಯಮ ಉಲ್ಲಂಘಿಸಿದ್ದಾರೆಂದು ವಕೀಲರು ಹೇಳಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ