ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗ ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಭಾನುವಾರ) ಪವಿತ್ರಾ ಗೌಡ ಮನೆಯಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ನಿವಾಸಕ್ಕೆ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಪವನ್‌ನನ್ನು ಕರೆದುಕೊಂಡು ಬರಲಾಗಿತ್ತು.
ಬೆಂಗಳೂರು, ಜೂ.16: ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗ ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಭಾನುವಾರ) ಪವಿತ್ರಾ ಗೌಡ ಮನೆಯಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ನಿವಾಸಕ್ಕೆ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಪವನ್‌ನನ್ನು ಕರೆದುಕೊಂಡು ಬರಲಾಗಿತ್ತು. ಈ ವೇಳೆ ಪವಿತ್ರಾ ಬಳಸುತ್ತಿದ್ದ ಚಪ್ಪಲಿ, ಶೂ, ಬಟ್ಟೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಪೊಲೀಸರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕರೆದೊಯ್ದಿದ್ದಾರೆ. ಇನ್ನು ಈ ವೇಳೆ ಸ್ವಲ್ಪವು ಪಶ್ಚಾತಾಪವೇ ಇಲ್ಲದೇ ಆರೋಪಿ ಪವನ್ ನಗುತ್ತಿರುವ ದೃಶ್ಯ ಕಂಡು ಬಂದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos