AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಎಲ್ಲಿ-ಯಾವಾಗ ಆಗಿತ್ತು ಗೊತ್ತಾ?

ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಎಲ್ಲಿ-ಯಾವಾಗ ಆಗಿತ್ತು ಗೊತ್ತಾ?

ರಮೇಶ್ ಬಿ. ಜವಳಗೇರಾ
|

Updated on: Jul 18, 2026 | 6:26 PM

Share

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ (HD Deve Gowda's Wife Chennamma) ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಇನ್ನು 2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು.

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ (HD Deve Gowda’s Wife Chennamma) ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಚೆನ್ನಮ್ಮ ಅವರ ಆರೋಗ್ಯದಲ್ಲಿ ಸಣ್ಣ ಪ್ರಮಾಣದ ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸಿದ್ದವು. ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸುಮಾರು 25 ದಿನ ಚಿಕಿತ್ಸೆ ಪಡೆದುಕೊಂಡು ಮನೆಗೆ ಹಿಂದಿರುಗಿದ್ದರು. ಮತ್ತೆ ಜುಲೈ 15ರಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು 2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು.

ಇದನ್ನೂ ಓದಿ:  Chennamma Deve Gowda Death: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

Follow Us