AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಪಡಿತರ ಅಕ್ಕಿಗೆ ಸರ್ವರ್ ಸಮಸ್ಯೆ: ರೇಷನ್ ವಿತರಣೆ ವಿಳಂಬದಿಂದ ಜನ ಪರದಾಟ

ರಾಜ್ಯಾದ್ಯಂತ ಪಡಿತರ ಅಕ್ಕಿಗೆ ಸರ್ವರ್ ಸಮಸ್ಯೆ: ರೇಷನ್ ವಿತರಣೆ ವಿಳಂಬದಿಂದ ಜನ ಪರದಾಟ

ರಮೇಶ್ ಬಿ. ಜವಳಗೇರಾ
|

Updated on: Nov 27, 2026 | 10:22 PM

Share

ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪಡಿತರ ವಿತರಣೆಯಲ್ಲಿ ಸರ್ವರ್ ಸಮಸ್ಯೆಗಳು ತಲೆದೋರಿವೆ. ಇದರ ಪರಿಣಾಮವಾಗಿ, ಲಕ್ಷಾಂತರ ಫಲಾನುಭವಿಗಳು ಪಡಿತರ ಅಕ್ಕಿ ಪಡೆಯಲು ಪ್ರತಿದಿನವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರವು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಪಡಿತರ ವಿತರಿಸಲು ಆದೇಶ ನೀಡಿದ್ದರೂ, ತಾಂತ್ರಿಕ ಅಡಚಣೆಗಳಿಂದಾಗಿ ಈ ಆದೇಶ ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಸರ್ವರ್ ಸಮಸ್ಯೆಗಳಿಂದಾಗಿ ರೇಷನ್ ವಿತರಣೆ ವಿಳಂಬವಾಗುತ್ತಿದ್ದು, ಹಲವೆಡೆ ಸಂಪೂರ್ಣವಾಗಿ ನಿಂತು ಹೋಗಿದೆ.

ಬೆಂಗಳೂರು, ನವೆಂಬರ್ 27:  ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪಡಿತರ ವಿತರಣೆಯಲ್ಲಿ ಸರ್ವರ್ ಸಮಸ್ಯೆಗಳು ತಲೆದೋರಿವೆ. ಇದರ ಪರಿಣಾಮವಾಗಿ, ಲಕ್ಷಾಂತರ ಫಲಾನುಭವಿಗಳು ಪಡಿತರ ಅಕ್ಕಿ ಪಡೆಯಲು ಪ್ರತಿದಿನವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರವು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಪಡಿತರ ವಿತರಿಸಲು ಆದೇಶ ನೀಡಿದ್ದರೂ, ತಾಂತ್ರಿಕ ಅಡಚಣೆಗಳಿಂದಾಗಿ ಈ ಆದೇಶ ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಸರ್ವರ್ ಸಮಸ್ಯೆಗಳಿಂದಾಗಿ ರೇಷನ್ ವಿತರಣೆ ವಿಳಂಬವಾಗುತ್ತಿದ್ದು, ಹಲವೆಡೆ ಸಂಪೂರ್ಣವಾಗಿ ನಿಂತು ಹೋಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಸರ್ವರ್ ಸಮಸ್ಯೆ ನಿರಂತರವಾಗಿ ಕಾಡುತ್ತಿದೆ. ಇದೇ ರೀತಿಯ ಪರಿಸ್ಥಿತಿ ಸಕಲೇಶಪುರ ತಾಲೂಕಿನಲ್ಲಿಯೂ ಕಂಡುಬಂದಿದೆ. ಇಲ್ಲಿನ ಫಲಾನುಭವಿಗಳು ಕೊರೆಯುವ ಚಳಿಯಲ್ಲೂ ಮುಂಜಾನೆ 4 ಗಂಟೆಯಿಂದಲೇ ರೇಷನ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದರೂ, ಸರ್ವರ್ ದೋಷದಿಂದ ಪಡಿತರ ಸಿಗದೆ ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜನಗರ ಜಿಲ್ಲೆಯ ದಡದಹಳ್ಳಿಯಲ್ಲೂ ಇದೇ ರೀತಿಯ ಸಮಸ್ಯೆ ಉಂಟಾಗಿದ್ದು, ಜನಸಾಮಾನ್ಯರು ತಮ್ಮ ದೈನಂದಿನ ಅವಶ್ಯಕತೆಗಳಿಗಾಗಿ ಕಾಯುವಂತಾಗಿದೆ.

ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಎದುರಾಗಿರುವ ಈ ತಾಂತ್ರಿಕ ಸಮಸ್ಯೆಗಳು ಅನ್ನಭಾಗ್ಯ ಯೋಜನೆಯ ಉದ್ದೇಶವನ್ನು ತೊಂದರೆಗೊಳಗಾಗಿಸುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಈ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಿ, ಪಡಿತರ ವಿತರಣೆಯನ್ನು ಸುಗಮಗೊಳಿಸುವಂತೆ ಫಲಾನುಭವಿಗಳು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More