AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ

ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 14, 2026 | 5:36 PM

Share

ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ, ಜಮೀರ್‌ ಗೂ ಇದೇ ಪರಿಸ್ಥಿತಿ. ಇವತ್ತು ರಾತ್ರಿಯೇ ತಲೆದಂಡವಾಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಇನ್ನು ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ, (ಏಪ್ರಿಲ್ 14): ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದ ಕಾಂಗ್ರೆಸ್ ಮುಸ್ಲಿಂ ನಾಯಕರಿಗೆ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪರಿಷತ್ ಸದಸ್ಯ ಜಬ್ಬರ್ ಅವರಿಂದ ರಾಜೀನಾಮೆ ಪಡೆದುಕೊಂಡಿದೆ. ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್​ ಅವರನ್ನ ಸಹ ತಲೆದಂಡ ಮಾಡಲಾಗಿದೆ. ಇದೀಗ ಜಮೀರ್ ಅಹಮ್ಮದ್ ಖಾನ್ ಸಚಿವ ಸ್ಥಾನಕ್ಕೆ ಕುತ್ತು ಬಂದಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್ ರಹಸ್ಯ ಮಾತುಕತೆ ನಡೆಸಿದ್ದು, ಯಾವಾಗ ತಲೆದಂಡವಾಗುತ್ತೋ ಗೊತ್ತಿಲ್ಲ.

ಈ ಬೆಳವಣಿಗೆಗಳ ನಡುವೆ ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ, ಜಮೀರ್‌ ಗೂ ಇದೇ ಪರಿಸ್ಥಿತಿ. ಇವತ್ತು ರಾತ್ರಿಯೇ ತಲೆದಂಡವಾಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಇನ್ನು ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More