ಲೋಕಸಭಾ ಚುನಾವಣೆ ನಂತರ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ವಿರುದ್ಧ ಕ್ರಮ: ಅರ್ ಅಶೋಕ

|

Updated on: May 24, 2024 | 7:03 PM

ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬ್ಯೂಸಿಯಾಗಿದ್ದಾರೆ, ಚುನಾವಣೆ ಮುಗಿದು ಫಲಿತಾಂಶ ಪ್ರಕಟಗೊಂಡ ಬಳಿಕ ಅಧ್ಯಕ್ಷರು ಮತ್ತು ವರಿಷ್ಠರು ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ವಿರುದ್ಧ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅಶೋಕ ಹೇಳಿದರು.

ಬೆಂಗಳೂರು: ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ (Shivaram Hebbar) ಇವತ್ತು ಮತ್ತೊಮ್ಮೆ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ ಮತ್ತು ಇನ್ನೊಬ್ಬ ಶಾಸಕ ಎಸ್ ಟಿ ಸೋಮಶೇಖರ್ (ST Somashekhar) ಸಹ ಆಗಾಗ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುತ್ತಿರುತ್ತಾರೆ. ಅವರಿಬ್ಬರನ್ನು ನಮ್ಮ ಪಕ್ಷ ದಾರಿ ತಪ್ಪಿದ ಮಕ್ಕಳೆಂದು ಪರಿಗಣಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಅರ್ ಅಶೋಕ (R Ashoka) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಅಶೋಕ, ಹೆಬ್ಬಾರ್ ಆಗಲೀ ಸೋಮಶೇಖರ್ ಅವರಾಗಲೀ ಯಾರನ್ನು ಭೇಟಿಯಾಗುತ್ತಾರೆ ಅನ್ನೋದು ತಮ್ಮ ಪಕ್ಷಕ್ಕೆ ಬೇಕಿಲ್ಲ, ಅವರನ್ನು ಪಕ್ಷ ದಾರಿ ತಪ್ಪಿದ ಮಕ್ಕಳೆಂದು ಪರಿಗಣಿಸುತ್ತದೆ ಎಂದು ಹೇಳಿದರು. ಕಳೆದ ಸುಮಾರು ದಿನಗಳಿಂದ ಅವರಿಬ್ಬರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೂ ಇದುವರೆಗೆ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಕೇಳಿದ ಪ್ರಶ್ನೆಗೆ ಅಶೋಕ ಸಮರ್ಪಕ ಉತ್ತರ ನೀಡಲಿಲ್ಲ. ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬ್ಯೂಸಿಯಾಗಿದ್ದಾರೆ, ಚುನಾವಣೆ ಮುಗಿದು ಫಲಿತಾಂಶ ಪ್ರಕಟಗೊಂಡ ಬಳಿಕ ಅಧ್ಯಕ್ಷರು ಮತ್ತು ವರಿಷ್ಠರು ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ವಿರುದ್ಧ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸರ್ಕಾರ ಪತನದ ಕ್ಷಣಗಣನೆ ಆರಂಭವಾಗಿದೆ, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಉರುಳುತ್ತೆ: ಅರ್ ಅಶೋಕ