ಬಿಜೆಪಿ‌ ಶಾಸಕ ಚಂದ್ರ ಲಮಾಣಿ ವಿರುದ್ಧ ಕಾರ್ಯಕರ್ತರ ಆಕ್ರೋಶ: ಪ್ರಚಾರ ವಾಹನ ಹತ್ತಲು ಬಿಡ್ಲಿಲ್ಲ

Edited By:

Updated on: Apr 08, 2024 | 5:51 PM

ಹಾವೇರಿ ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ಶಾಸಕ ಚಂದ್ರ ಲಮಾಣಿ ಪ್ರಚಾರಕ್ಕೆ ಬಂದಿದ್ದರು. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಪ್ರಚಾರ ನಡೆದಿದ್ದ ವೇಳೆ ಶಾಸಕರಿಗೆ ವಿರೋಧ ವ್ಯಕ್ತ ಪಡಿಸಿದ್ದಾರೆ.  ಮಾಜಿ ಶಾಸಕ ರಾಮಪ್ಪ ಲಮಾಣಿ ಪರ ನಿಲುವು ತೋರಿದ್ದಕ್ಕೆ ಕಾರ್ಯಕರ್ತರ ಕಡೆಗಣನೆ ಆರೋಪ ಮಾಡಿದ್ದಾರೆ.

ಗದಗ, ಏಪ್ರಿಲ್ 08: ಶಿರಹಟ್ಟಿ ಬಿಜೆಪಿ‌ ಶಾಸಕ ಚಂದ್ರ ಲಮಾಣಿ (Chandra Lamani) ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ವಾಹನ ಹತ್ತಲು ಬಿಡದೇ ಧಿಕ್ಕಾರ ಕೂಗಿದ್ದಾರೆ. ಹಾವೇರಿ ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ಶಾಸಕ ಚಂದ್ರ ಲಮಾಣಿ ಪ್ರಚಾರಕ್ಕೆ ಬಂದಿದ್ದರು. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಪ್ರಚಾರ ನಡೆದಿದ್ದ ವೇಳೆ ಶಾಸಕರಿಗೆ ವಿರೋಧ ವ್ಯಕ್ತ ಪಡಿಸಿದ್ದಾರೆ.  ಮಾಜಿ ಶಾಸಕ ರಾಮಪ್ಪ ಲಮಾಣಿ ಪರ ನಿಲುವು ತೋರಿದ್ದಕ್ಕೆ ಕಾರ್ಯಕರ್ತರ ಕಡೆಗಣನೆ ಆರೋಪ ಮಾಡಿದ್ದಾರೆ. ಹೀಗಾಗಿ ಶಾಸಕರು ಪ್ರಚಾರ ವಾಹನ ಹತ್ತಲು ಬಿಡಲ್ಲ ಅಂತಾ ವಿರೋಧ ಮಾಡಿದ್ದಾರೆ. ಬಳಿಕ ಹಿರಿಯರ ಮಧ್ಯಸ್ಥಿತಿ ನಡುವೆ ಪರಿಸ್ಥಿತಿ ತಿಳಿಗೊಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 08, 2024 05:50 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More