ದೇಶ ಮುನ್ನಡೆಸುವ ಶಕ್ತಿಯನ್ನು ದೇವರು ನಿಮಗೆ ನೀಡಲಿ: ಮೋದಿ ಜನ್ಮದಿನಕ್ಕೆ ಆಮಿರ್ ಖಾನ್ ಶುಭ ಹಾರೈಕೆ

Updated on: Sep 17, 2025 | 3:16 PM

ಇಂದು (ಸೆಪ್ಟೆಂಬರ್ 17) ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ಈ ಬಾರಿ ಅವರು 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದೇಶದ ಪ್ರಜೆಗಳು, ವಿವಿಧ ಕ್ಷೇತ್ರದ ಗಣ್ಯರು ಮೋದಿಗೆ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಅನುಪಮ್ ಖೇರ್, ಶಾರುಖ್ ಖಾನ್, ಆಮಿರ್ ಖಾನ್ ಮುಂತಾದ ನಟರು ಶುಭ ಹಾರೈಸಿದ್ದಾರೆ.

ಇಂದು (ಸೆಪ್ಟೆಂಬರ್ 17) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜನ್ಮದಿನ. ಈ ಬಾರಿ ಅವರು 75ನೇ ವರ್ಷದ ಹುಟ್ಟುಹಬ್ಬ (Narendra Modi 75th Birthday) ಆಚರಿಸಿಕೊಳ್ಳುತ್ತಿದ್ದಾರೆ. ದೇಶದ ಪ್ರಜೆಗಳು, ವಿವಿಧ ಕ್ಷೇತ್ರದ ಗಣ್ಯರು ಮೋದಿಗೆ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಅನುಪಮ್ ಖೇರ್, ಶಾರುಖ್ ಖಾನ್, ಆಮಿರ್ ಖಾನ್ (Aamir Khan) ಮುಂತಾದ ನಟರು ಶುಭ ಹಾರೈಸಿದ್ದಾರೆ. ‘ನಮ್ಮ ದೇಶದ ವಿಕಾಸಕ್ಕಾಗಿ ನೀವು ನೀಡಿದ ಕೊಡುಗೆಯನ್ನು ಯಾವಾಗಲೂ ಸ್ಮರಿಸಲಾಗುತ್ತದೆ. ನಿಮಗೆ ಆ ಭಗವಂತ ದೀರ್ಘಾಯುಷ್ಯ ನೀಡಲಿ. ಭಾರತವನ್ನು ಮುನ್ನಡೆಸುವ ಶಕ್ತಿಯನ್ನು ಆ ದೇವರು ನಿಮಗೆ ನೀಡಲಿ’ ಎಂದು ನಟ ಆಮಿರ್ ಖಾನ್ ಶುಭ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 17, 2025 03:14 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More