ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 

Updated on: Apr 06, 2026 | 11:59 AM

ನಟ, ನಿರ್ದೇಶಕ ಹಾಗೂ ಸಿನಿಮಾ ನಿರ್ಮಾಪಕ, ಕೊರಿಯೋಗ್ರಾಫರ್ ಅವರು ಸಿಂಪಲ್ ಆಗಿ ಜೀವನ ನಡೆಸಿದ್ದಾರೆ. ಅವರು ನೆಲದಮೇಲೆ ಮಲಗಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಅವರ ಸರಳತೆ ಮೆಚ್ಚಲೇಬೇಕು. 

ಪ್ರಭುದೇವ ಅವರು ನೂರಾರು ಕೋಟಿ ಒಡೆಯರು. ಅವರು ಕೊರಿಯೋಗ್ರಾಫರ್, ನಟ, ನಿರ್ಮಾಪಕ, ನಿರ್ದೇಶಕ ಹೀಗೆ ಹಲವು ಜವಾಬ್ದಾರಿಗಳನ್ನು ಅವರು ನಿರ್ವಹಿಸಿದ್ದಾರೆ. ಇಷ್ಟೆಲ್ಲ ಶ್ರೀಮಂತಿಕೆ ಇದ್ದರೂ ಅವರಿಗೆ ಬರಿ ನೆಲದ ಮೇಲೆ ಮಲಗೋದು ಹೆಚ್ಚು ಖುಷಿ ಕೊಟ್ಟಿದೆ. ಈ ಸಂದರ್ಭದ ವಿಡಿಯೋನ ಅವರು ಹಂಚಿಕೊಂಡಿದ್ದಾರೆ. ತೋಟ ಒಂದರಲ್ಲಿ ಎಳನೀರು ಕುಡಿದು ಅಲ್ಲಿಯೇ ನೆಲದ ಮೇಲೆ ಮಲಗಿದ್ದಾರೆ. ಪ್ರಭುದೇವ ಅವರ ವಿಡಿಯೋಗೆ ಫ್ಯಾನ್ಸ್ ಪ್ರತಿಕ್ರಿಯಿಸಿದ್ದು, ಸರಳತೆ ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More