ಹುಟ್ಟುಹಬ್ಬದಂದೇ ಕಿರುತೆರೆ ನಟ ಸಾವು: ಆಸ್ಪತ್ರೆಯಲ್ಲೇ ಕೇಕ್ ಕತ್ತರಿಸಿದ ಕುಟುಂಬ, ಅಂಗಾಂಗ ದಾನ

Edited By:

Updated on: Oct 25, 2025 | 7:39 PM

ಸಿನಿಮಾ ಮತ್ತು ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಬೈಕ್ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಹುಟ್ಟುಹಬ್ಬದ ದಿನವೇ ಆರ್ಯನ್ ನಿಧನರಾಗಿದ್ದಾರೆ. ಕುಟುಂಬದವರು ಮೃತದೇಹದ ಕೈ ಹಿಡಿದು ಕೇಕ್ ಕತ್ತರಿಸುವ ಮೂಲಕ ಅಂತಿಮ ಶ್ರದ್ಧಾಂಜಲಿ ಸಲ್ಲಿಸಿದರು. ಜೊತೆಗೆ, ಆರ್ಯನ್ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

ಕೊಪ್ಪಳ, ಅಕ್ಟೋಬರ್​ 25: ಸಿನಿಮಾ ಮತ್ತು ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ವಸ್ತ್ರದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಮೂಲದ ಆರ್ಯನ್ ಬೆಂಗಳೂರಲ್ಲಿ ನೆಲಸಿದ್ದ. ಹಾಸನಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಗಾಯಗೊಂಡಿದ್ದ. ನಿನ್ನೆ ಹುಟ್ಟುಹಬ್ಬದ ದಿನವೇ ಆರ್ಯನ್ ಮೃತಪಟ್ಟಿದ್ದಾರೆ. ಆತನ ​ಕೈ ಹಿಡಿದು ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಆರ್ಯನ್​​ ಅಂಗಾಂಗ ದಾನ ಮಾಡಿ ಕುಟುಂಬ ಸಾರ್ಥಕತೆ ಮೆರೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More